ಗುರುವಾರ , ನವೆಂಬರ್ 21, 2019
21 °C

ಮಹಾರಾಷ್ಟ್ರ ಬಿಕ್ಕಟ್ಟು: ಇಂದು ಬಿಜೆಪಿ ಕೋರ್‌ ಕಮಿಟಿ ಸಭೆ

Published:
Updated:

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ಸರ್ಕಾರ ರಚನೆಗೆ ಆಹ್ವಾನ ನೀಡಿದ ಬೆನ್ನಲ್ಲೇ ಬಿಜೆಪಿಯು ಕೋರ್‌ ಕಮಿಟಿ ಸಭೆ ಕರೆದಿದೆ. ಸರ್ಕಾರ ರಚನೆ ಸಂಬಂಧ ಉಲ್ಬಣಿಸಿರುವ ಬಿಕ್ಕಟ್ಟು ಪರಿಹಾರದ ಬಗ್ಗೆ ಬಿಜೆಪಿ ನಾಯಕರು ಇಂದು ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್‌ ಪಾಟೀಲ್‌ ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ಕೋರ್‌ ಕಮಿಟಿ ಸಭೆಯಲ್ಲಿ ಬಿಕ್ಕಟ್ಟು ಪರಿಹಾರದ ಬಗ್ಗೆ ಚರ್ಚಿಸಲಾಗುವುದು. ಆ ನಂತರ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ತಿಳಿಸಿದೆ.

ಇದೇ ವೇಳೆ, ಶಿವಸೇನೆಯು ಬಿಗಿಪಟ್ಟನ್ನು ಮುಂದುವರೆಸಿದ್ದು, ಕಾಂಗ್ರೆಸ್‌ ತನ್ನ ಶತ್ರು ಅಲ್ಲವೆಂದು ಹೇಳುವ ಮೂಲಕ ಹೊಸ ವರಸೆ ಆರಂಭಿಸಿದೆ. ‘ನಾವು ಈ ಹಿಂದೆ ಹಲವು ವಿಚಾರಗಳಲ್ಲಿ ಬಿಜೆಪಿಯನ್ನು ವಿರೋಧಿಸಿದ್ದೇವೆ. ಹಾಗಂದ ಮಾತ್ರಕ್ಕೆ ಬಿಜೆಪಿ ನಮ್ಮ ಶತ್ರುವಲ್ಲ. ಅದೇ ರೀತಿ ಕಾಂಗ್ರೆಸ್‌ನೊಂದಿಗೆ ನಾವು ಸೈದ್ದಾಂತಿಕ ವಿರೋಧ ಹೊಂದಿರಬಹುದು. ಆದರೆ, ಕಾಂಗ್ರೆಸ್‌ ಸಹ ನಮ್ಮ ಶತ್ರುವಲ್ಲ,’ ಎಂದು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ. 

ಪ್ರತಿಕ್ರಿಯಿಸಿ (+)