ಶುಕ್ರವಾರ, ಜನವರಿ 22, 2021
26 °C
ಕ್ಷಿಪ್ರ ಬೆಳವಣಿಗೆ: ಫಡಣವೀಸ್‌, ಅಜಿತ್‌ ಪ್ರಮಾಣವಚನ

‘ಮಹಾ’ ಅಚ್ಚರಿ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ರಾತ್ರಿ ಬೆಳಗಾಗುವುದರೊಳಗೆ ಮಹಾರಾಷ್ಟ್ರದ ರಾಜಕಾರಣದಲ್ಲಿ ಬೆರಗುಗೊಳಿಸುವ ಬೆಳವಣಿಗೆಯಾಗಿದೆ.

ಶಿವಸೇನಾ– ಕಾಂಗ್ರೆಸ್‌–ಎನ್‌ಸಿಪಿ ಮೈತ್ರಿಯು ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿಯ ದೇವೇಂದ್ರ ಫಡಣವೀಸ್‌ ಮುಖ್ಯಮಂತ್ರಿಯಾಗಿ ಮತ್ತು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕ ಅಜಿತ್‌ ಪವಾರ್‌ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ಶನಿವಾರ ಮುಂಜಾನೆ 7.30ಕ್ಕೆ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಪ್ರಮಾಣವಚನ ಬೋಧಿಸಿದರು.  ಇದಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ‘ಬಿಜೆಪಿಯನ್ನು ಬೆಂಬಲಿಸುವ ಅಜಿತ್‌ ಪವಾರ್‌ ಅವರ ನಿರ್ಧಾರ ಪಕ್ಷದ ತೀರ್ಮಾನವಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದರು.

‘ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ ಭಾರತದ ಇತಿಹಾಸದಲ್ಲಿ ಕಪ್ಪು ಅಧ್ಯಾಯವಾಗಿ ಉಳಿಯಲಿದೆ’ ಎಂದು ಕಾಂಗ್ರೆಸ್‌ ಟೀಕಿಸಿದೆ. ‘ಕೇಂದ್ರ ಸರ್ಕಾರ ಮಹಾರಾಷ್ಟ್ರದ ಮೇಲೆ ನಿರ್ದಿಷ್ಟ ದಾಳಿ ನಡೆಸಿದೆ’ ಎಂದು ಶಿವಸೇನಾ ಆರೋಪಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು