ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಟ ಮುಗಿಯಿತು ನಾಳೆ ಬಣ್ಣ ಬಯಲು: ತೀರ್ಪಿಗೆ ಎನ್‌ಸಿಪಿ, ಕಾಂಗ್ರೆಸ್ ಸ್ವಾಗತ

Last Updated 26 ನವೆಂಬರ್ 2019, 6:22 IST
ಅಕ್ಷರ ಗಾತ್ರ

ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡಣವೀಸ್ ನೇತೃತ್ವದ ಬಿಜೆಪಿ ಸರ್ಕಾರ ನಾಳೆ (ನ.27) ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತ ಯಾಚಿಸಬೇಕು ಎನ್ನುವ ಸುಪ್ರೀಂ ಕೋರ್ಟ್‌ ತೀರ್ಪನ್ನುಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸ್ವಾಗತಿಸಿದೆ.

‘ಸತ್ಯಮೇವ ಜಯತೇ. ಬಿಜೆಪಿಯ ಆಟ ಮುಗಿಯಿತು’ (Satyamev Jayate BJP ka khel khatm) ಎಂದು ಕೋರ್ಟ್‌ ತೀರ್ಪು ಪ್ರಕಟವಾದ ಕೆಲವೇ ನಿಮಿಷಗಳಲ್ಲಿ ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಪ್ರತಿಕ್ರಿಯಿಸಿದರು.

‘ಪ್ರಜಾಸತ್ತಾತ್ಮಕ ಮೌಲ್ಯ ಮತ್ತು ಸಂವಿಧಾನದ ನೀತಿಗಳನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ಗೆ ನಾನು ಅಭಾರಿಯಾಗಿದ್ದೇನೆ. ಸಂವಿಧಾನದ ದಿನವೇ ಮಹಾರಾಷ್ಟ್ರದ ತೀರ್ಪು ಬಂದಿದ್ದು ಹೃದಯಸ್ಪರ್ಶಿ ವಿದ್ಯಮಾನ. ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಅವರಿಗೆ ಸಂದ ಗೌರವ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿದ್ಯಮಾನಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟಕ್ಕೆ ತೃಪ್ತಿ ನೀಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಪ್ರತಿಕ್ರಿಯಿಸಿದ್ದಾರೆ.

‘ಸಂವಿಧಾನದ ದಿನ ಸಂವಿಧಾನಕ್ಕೆ ಗೌರವ ಸಿಕ್ಕಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಮಗೆ ಬಹುಮತವಿದೆ. ಬಿಜೆಪಿಯ ಬಣ್ಣ ನಾಳೆ ಬಯಲಾಗುತ್ತೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT