ಸೋಮವಾರ, ಜುಲೈ 26, 2021
21 °C

ಮಹಾರಾಷ್ಟ್ರ | ಟಿವಿ ನೋಡುವುದು ಬೇಡ ಎಂದಿದ್ದಕ್ಕೆ ಹುಡುಗ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Suicide

ಪುಣೆ: ಬಹಳ ಹೊತ್ತು ಟಿ.ವಿ ನೋಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಬಾಲಕ ಹಾಗೂ ಆತನ ತಾಯಿಯು ಬಿಬ್ವೆವಾಡಿ ಪ್ರದೇಶದ ಪುಟ್ಟ ಮನೆಯೊಂದರಲ್ಲಿ ವಾಸವಿದ್ದರು. ಬೆಳ್ಳಿಗೆಯಿಂದ ಹುಡುಗ ಟಿ.ವಿ ನೋಡುವುದರಲ್ಲಿ ಮಗ್ನನಾಗಿದ್ದ. ಮಗನನ್ನು ಬೈದ ತಾಯಿ, ಟಿ.ವಿ ಬಂದ್ ಮಾಡಿದ್ದರು. ಬೇಸರಗೊಂಡ ಬಾಲಕ, ಮಹಡಿಗೆ ಹೋಗಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಾಲಕನ ಸಹೋದರಿಯು ಮಹಡಿಗೆ ಹೋಗಿ ನೋಡಿದಾಗ ನೇಣು ಹಾಕಿಕೊಂಡ ವಿಚಾರ ತಿಳಿದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು