ಶುಕ್ರವಾರ, ಮೇ 29, 2020
27 °C

ಮಹಾರಾಷ್ಟ್ರದಲ್ಲಿ 1140 ಪೊಲೀಸ್ ಸಿಬ್ಬಂದಿಗೆ ಕೋವಿಡ್–19

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ಮುಂಬೈ: ಮಹಾರಾಷ್ಟ್ರದಲ್ಲಿ ಈವರೆಗೆ 1,140 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಶನಿವಾರ ತಿಳಿಸಿದೆ.

ಸೋಂಕಿತರ ಪೈಕಿ 10 ಮಂದಿ ಮೃತಪಟ್ಟಿದ್ದಾರೆ. 268 ಸಿಬ್ಬಂದಿ ಗುಣಮುಖರಾಗಿದ್ದು, 862 ಸಿಬ್ಬಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ ಅತಿ ಹೆಚ್ಚು ಸಾವು ಸಂಭವಿಸಿದ ರಾಜ್ಯವೂ ಮಹಾರಾಷ್ಟ್ರವೇ ಆಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಮಹಾರಾಷ್ಟ್ರದಲ್ಲಿ ಈವರೆಗೆ 29,100 ಮಂದಿಗೆ ಸೋಂಕು ತಗುಲಿದ್ದು, 1,068 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು