ಶುಕ್ರವಾರ, ಏಪ್ರಿಲ್ 3, 2020
19 °C

ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಸಲ್ಲಿಸಿದ್ದ ಜಾತಿ ಪ್ರಮಾಣಪತ್ರ ಅಸಿಂಧು

ಪಿಟಿಐ Updated:

ಅಕ್ಷರ ಗಾತ್ರ : | |

ಸೊಲ್ಲಾಪುರ: ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜೈಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಸಲ್ಲಿಸಿದ್ದ ಜಾತಿ ಪ್ರಮಾಣಪತ್ರವನ್ನು ಸೋಮವಾರ ಜಿಲ್ಲಾ ಜಾತಿ ಮಾನ್ಯತಾ ಸಮಿತಿ ಅಸಿಂಧುಗೊಳಿಸಿದ್ದು, ಸಂಸದರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದೆ.

ಸೊಲ್ಲಾಪುರ ಕ್ಷೇತ್ರವು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿದೆ. 

‘ಸಮಿತಿಗೆ ದೂರು ನೀಡಿದ್ದ ವಕೀಲರೊಬ್ಬರು, ಸ್ವಾಮೀಜಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ’ ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಸುಶೀಲ್‌ಕುಮಾರ್ ಶಿಂಧೆ ಅವರನ್ನು ಸ್ವಾಮೀಜಿ 1.5 ಲಕ್ಷ ಮತಗಳಿಂದ ಸೋಲಿಸಿದ್ದರು. 

ಪರಿಶಿಷ್ಟ ಜಾತಿಗೆ ಸೇರುವ ‘ಬೇಡ ಜಂಗಮ’ ಸಮುದಾಯದವರೆಂದು ಸ್ವಾಮೀಜಿ ಚುನಾವಣಾ ಅಫಿಡವಿಟ್‌
ನಲ್ಲಿ ನಮೂದಿಸಿದ್ದಾರೆ. ಆದರೆ, ಸ್ವಾಮೀಜಿ ‘ಹಿಂದೂ ಲಿಂಗಾಯತ’ ಸಮುದಾಯಕ್ಕೆ ಸೇರಿದವರೆಂದು ಪ್ರಮೋದ್ ಗಾಯಕ್‌ ವಾಡ್ ದೂರಿದ್ದು, ತನಿಖೆ ನಡೆಸಲು ಕೋರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು