ಸೋಮವಾರ, ಆಗಸ್ಟ್ 2, 2021
21 °C

ಭಾರತ–ಚೀನಾ ಉದ್ವಿಗ್ನ: ಪರಿಸ್ಥಿತಿ ತಿಳಿಗೊಳಿಸಲು ಮೇಜರ್ ಜನರಲ್ ಮಟ್ಟದ ಮಾತುಕತೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

China India stand off

ನವದೆಹಲಿ: ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನಗೊಂಡಿರುವ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ಆರಂಭವಾಗಿದೆ.

ಸೋಮವಾರ ರಾತ್ರಿ ಲಡಾಖ್‌ನ ಪೂರ್ವಭಾಗದ ಗಲ್ವಾನ್‌ ಕಣಿವೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾದ ಸೇನೆಗೂ ಹಾನಿಯಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.

ಇದನ್ನೂ ಓದಿ: 

ನರವಾಣೆ ಪಠಾಣ್‌ಕೋಟ್ ಭೇಟಿ ರದ್ದು: ಚೀನಾ ಜತೆಗಿನ ಗಡಿ ಸಂಘರ್ಷ ಹೆಚ್ಚುತ್ತಿರುವ ಬೆನ್ನಲ್ಲೇ ಸೇನಾ ಮುಖ್ಯಸ್ಥ ಎಂ.ಎಂ.ನರವಾಣೆ ಅವರ ಪಠಾಣ್‌ಕೋಟ್ ಭೇಟಿ ರದ್ದಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಈ ಮಧ್ಯೆ, ವಿವಾದಿತ ಗಡಿ ಪ್ರದೇಶ ದಾಟಿ ಭಾರತೀಯ ಸೇನೆಯೇ ನಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ ಎಂದು ಚೀನಾ ಆರೋಪಿಸಿದೆ. ಭಾರತದ ಪಡೆಗಳು ಸೋಮವಾರ ರಾತ್ರಿ ಎರಡು ಬಾರಿ ಗಡಿ ದಾಟಿದ್ದವು. ನಮ್ಮ ಸೇನಾ ಪಡೆಗಳನ್ನು ಪ್ರಚೋದಿಸಿದ್ದಲ್ಲದೆ, ದಾಳಿ ಮಾಡಿದ್ದವು. ಪರಿಣಾಮವಾಗಿ ಚಕಮಕಿ ನಡೆದು ಎರಡೂ ದೇಶಗಳ ಯೋಧರಿಗೆ ಹಾನಿಯಾಗುವಂತಾಯಿತು ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು