ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆಯಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಭಕ್ತರು

Last Updated 15 ಜನವರಿ 2020, 14:44 IST
ಅಕ್ಷರ ಗಾತ್ರ
ADVERTISEMENT
""

ತಿರುವನಂತಪುರಂ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರಜ್ಯೋತಿಯನ್ನು (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು

ಸಂಜೆ 6.45ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಭಕ್ತರು ಆಯ್ಯಪ್ಪ ನಾಮಸ್ಮರಣೆ ಮಾಡಿದರು.

ಇದಕ್ಕೂ ಮೊದಲು ಪಂದಳ ರಾಜಮನೆತನದಿಂದ ವಿಶೇಷ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು.

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಬುಧವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ–ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಮಕರಜ್ಯೋತಿ ದರ್ಶನದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು.

ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಮಕರ ದೀಪೋತ್ಸವ ನಡೆಯಿತು. ಇನ್ನು ಈ ಬಾರಿ ಜನವರಿ 21ರ ತನಕ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಕರ ಜ್ಯೋತಿಯು ವಿಶೇಷ ಯಾತ್ರಾ ದಿನವಾದ ಕಾರಣ, ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT