ಮಳವಳ್ಳಿ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನ

7

ಮಳವಳ್ಳಿ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನ

Published:
Updated:

ಮಳವಳ್ಳಿ: ಕೆಎಸ್‌ಆರ್‌ಟಿಸಿ ಡಿಪೊ ವ್ಯವಸ್ಥಾಪಕ ಹಾಗೂ ಅಧಿಕಾರಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ತಾಲ್ಲೂಕಿನ ಮೊತ್ತೊಬ್ಬ ಚಾಲಕ– ನಿರ್ವಾಹಕ ಸೋಮವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಾಲ್ಲೂಕಿನ ಗಾಜನೂರು ಗ್ರಾಮದ ನಿವಾಸಿ, ನಿಗಮದ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ಲೋಕೇಶ್ ಆತ್ಮಹತ್ಯೆಗೆ ಯತ್ನಿಸಿದವರು. ಇವರಿಗೆ 15 ದಿಗಳಿಂದ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ. ಮನವಿ ನೀಡಿದರೂ ಪ್ರಯೋಜನಕ್ಕೆ ಬಾರದ ಕಾರಣ ತಮ್ಮ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನ. 30ರಂದು ನಿಗಮದ ಚಾಲಕ ಮಹೇಶ್ ಎಂಬುವರು ಡಿಪೊ ವ್ಯವಸ್ಥಾಪಕರ ವಿರುದ್ಧ ಮುಖ್ಯಮಂತ್ರಿ ಅವರ ಹೆಸರಿಗೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !