ಗುರುವಾರ , ಡಿಸೆಂಬರ್ 5, 2019
21 °C

ಮಹಾರಾಷ್ಟ್ರ ರಾಜ್ಯಪಾಲರಿಂದ ಬಿಜೆಪಿಗೆ ನೆರವು: ಮಲ್ಲಿಕಾರ್ಜುನ ಖರ್ಗೆ ಟೀಕೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಬಿಜೆಪಿಗೆ ನೆರವಾಗಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.

ಬಿಜೆಪಿಗೆ ನೆರವಾಗುವ ಸಲುವಾಗಿ ರಾಜ್ಯಪಾಲರು ಶಿವಸೇನಾ ಮತ್ತು ಎನ್‌ಸಿಪಿಗೆ ಸಾಕಷ್ಟು ಸಮಯಾವಕಾಶ ನೀಡಲಿಲ್ಲ. ಕಾಂಗ್ರೆಸ್‌ಗೆ ಹಕ್ಕು ಮಂಡನೆಗೆ ಅವಕಾಶವನ್ನೇ ನೀಡಲಿಲ್ಲ. ಶಿವಸೇನಾಗೆ 48 ಗಂಟೆ ಕಾಲಾವಕಾಶ ನೀಡಲಾಗಿಲ್ಲ. ಸಾಂವಿಧಾನಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ತೋರ್ಪಡಿಸಿಕೊಳ್ಳಲಷ್ಟೇ ಅವರು ಪ್ರಕ್ರಿಯೆಗಳನ್ನು ನೆರವೇರಿಸಿದರು ಎಂದು ಖರ್ಗೆ ಟೀಕಿಸಿದ್ದಾರೆ.

ಬಾಳ ಠಾಕ್ರೆ ಸ್ಫೂರ್ತಿ ಸೆಲೆ ಎಂದು ಹೊಗಳಿದ ದೇವೇಂದ್ರ ಫಡಣವೀಸ್‌

ಕಾಂಗ್ರೆಸ್‌ಗೆ ಸರ್ಕಾರ ರಚನೆಗೆ ಆಹ್ವಾನವನ್ನೇ ನೀಡದೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿತ್ತು.

ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದ ಬಿಜೆಪಿ–ಶಿವಸೇನಾ ನಂತರ ಅಧಿಕಾರ ಹಂಚಿಕೆ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಮೈತ್ರಿಯನ್ನೇ ಕಡಿದುಕೊಂಡಿವೆ. ಪರಿಣಾಮವಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಇದೀಗ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ಜತೆಯಾಗಿ ಸರ್ಕಾರ ರಚಿಸಲು ಮುಂದಾಗಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು