ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಖರ್ಗೆ ಆಯ್ಕೆ

Last Updated 5 ಜೂನ್ 2020, 9:38 IST
ಅಕ್ಷರ ಗಾತ್ರ

ನವದೆಹಲಿ: ಜೂನ್‌ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್‌ ಪಕ್ಷವು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಮಲ್ಲಿಕಾರ್ಜುನ ಖರ್ಗೆ ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.

ಅವರು ಪ್ರಸ್ತುತ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

'ರಾಜ್ಯಸಭೆಗೆ ಕರ್ನಾಟಕದಿಂದ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದಿಸಿದ್ದಾರೆ' ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT