ಇಂಗ್ಲೆಂಡಿನಿಂದ ಗಡೀಪಾರು ಆದೇಶ: ಮೇಲ್ಮನವಿ ಸಲ್ಲಿಸಲು ಮಲ್ಯಗೆ ಅನುಮತಿ ನಿರಾಕರಣೆ

ಗುರುವಾರ , ಏಪ್ರಿಲ್ 25, 2019
22 °C

ಇಂಗ್ಲೆಂಡಿನಿಂದ ಗಡೀಪಾರು ಆದೇಶ: ಮೇಲ್ಮನವಿ ಸಲ್ಲಿಸಲು ಮಲ್ಯಗೆ ಅನುಮತಿ ನಿರಾಕರಣೆ

Published:
Updated:
Prajavani

ಲಂಡನ್‌: ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್‌ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ತಮ್ಮನ್ನು ಇಂಗ್ಲೆಂಡಿನಿಂದ ಗಡೀಪಾರು ಮಾಡಲು ಬ್ರಿಟನ್‌ ಸರ್ಕಾರದ ಗೃಹ ಕಾರ್ಯದರ್ಶಿ ಸಾಜಿದ್‌ ಜಾವಿದ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಲು ಅನುಮತಿ ನೀಡುವಂತೆ ಕೋರಿ ಮಲ್ಯ ಸಲ್ಲಿಸಿದ್ದ ಮೇಲ್ಮವಿಯನ್ನು ಬ್ರಿಟನ್‌ ಹೈಕೋರ್ಟ್‌ ನಿರಾಕರಿಸಿದೆ.

ಸಾಜಿದ್‌ ಜಾವಿದ್‌ ಅವರು ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ವೆಸ್ಟ್‌ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶಕ್ಕೆ ಸಹಿ ಹಾಕಿರುವ ನಿರ್ಧಾರವನ್ನು, ₹9,000 ಕೋಟಿ ವಂಚನೆ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಲ್ಯ ಅವರು ಪ್ರಶ್ನಿಸಲು ಅನುಮತಿ ನೀಡುವಂತೆ ಬ್ರಿಟನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

‘ನ್ಯಾಯಮೂರ್ತಿ ವಿಲಿಯಂ ಡೇವಿಸ್‌ ಅವರು ಇದೇ 5 ರಂದು ಮೇಲ್ಮನವಿ ಸಲ್ಲಿಸಲು ಅನುಮತಿ ನಿರಾಕರಿಸಿದ್ದಾರೆ’ ಎಂದು ಲಂಡನ್‌ ನ್ಯಾಯಾಲಯದ ವಕ್ತಾರರು ತಿಳಿಸಿದ್ದಾರೆ.

‘ಮಲ್ಯ ಮೇಲ್ಮನವಿಯ ಮೌಖಿಕ ಪರಿಗಣನೆಗೆ ಅರ್ಜಿ ಸಲ್ಲಿಸಲು ಐದು ದಿನಗಳ ಕಾಲಾವಕಾಶವಿದೆ. ಹೊಸದಾಗಿ ಅರ್ಜಿ ಸಲ್ಲಿಸಿದರೆ, ಅದನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು’ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !