ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ನನ್ನ ಫೋನ್ ಕದ್ದಾಲಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

Last Updated 3 ನವೆಂಬರ್ 2019, 3:09 IST
ಅಕ್ಷರ ಗಾತ್ರ

ಕೋಲ್ಕತ್ತ:ಕೇಂದ್ರ ಸರ್ಕಾರವು ನನ್ನ ದೂರವಾಣಿಯನ್ನು ಕದ್ದಾಲಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಇಸ್ರೇಲ್‌ನ ‘ಎನ್‌ಎಸ್‌ಒ ಗ್ರೂಪ್’ ಗೂಢಚರ್ಯೆ ತಂತ್ರಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ. ಅದನ್ನು ಬಳಸಿಕೊಂಡು ನನ್ನ ದೂರವಾಣಿ ಕದ್ದಾಲಿಸಲಾಗುತ್ತಿದೆ. ಇದಕ್ಕೆ ನನ್ನ ಬಳಿ ಸಾಕ್ಷ್ಯ ಇದೆ ಎಂದೂ ಅವರು ಹೇಳಿದ್ದಾರೆ.

‘ಎನ್‌ಎಸ್‌ಒ ಗ್ರೂಪ್’ ಅಭಿವೃದ್ಧಿಪಡಿಸಿರುವತಂತ್ರಾಂಶ ‘ಪೆಗಾಸಸ್‌’ ಬಳಸಿಕೊಂಡು ವಾಟ್ಸ್‌ಆ್ಯಪ್‌ ಕರೆ, ಸಂದೇಶ ಮತ್ತು ಇತರ ಮಾಹಿತಿ ಕದಿಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜಕಾರಣಿಗಳು, ಮಾಧ್ಯಮ ಸಿಬ್ಬಂದಿ, ವಕೀಲರು ಮತ್ತು ಸಾಮಾಜಿಕ ಹೋರಾಟಗಾರರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರಬೇಹುಗಾರಿಕೆ ನಡೆಸುತ್ತಿದೆ’ ಎಂದು ಆರೋಪಿಸಿದ್ದಾರೆ.

ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಬೇಕು. ಸಮಗ್ರ ತನಿಖೆಯಾಗಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT