ಬುಧವಾರ, ಫೆಬ್ರವರಿ 26, 2020
19 °C

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಮತಾ ರ್‍ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇನ್ನೂ ಆರಿಲ್ಲ. ಈ ನಡುವೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಯ್ದೆ ವಿರೋಧಿಸಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

‘ಕೇಂದ್ರ ಸರ್ಕಾರದ ಅಸಾಂವಿಧಾನಿಕ ಕಾಯ್ದೆಗಳ ವಿರುದ್ಧ ಕೊಲ್ಕತ್ತಾದಲ್ಲಿ ಬೃಹತ್‌ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ಕೆಂಪು ರಸ್ತೆಯಲ್ಲಿನ ಬಾಬಾಸಾಹೇಬ್‌ ಅಂಬೇಡ್ಕರ್‌ ಪ್ರತಿಮೆಯಿಂದ ರ್‍ಯಾಲಿ ಶುರುವಾಗಲಿದೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ಕೊಲ್ಕತ್ತಾದ ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಬೇಕಾಗಿಯೂ ಮಮತಾ ಕೋರಿದ್ದು, ‘ಪ್ರತಿಭಟನೆ ಶಾಂತಿಯುತವಾಗಿರಬೇಕು’ ಎಂದು ಮನವಿ ಮಾಡಿದ್ದಾರೆ. 

ಪೌರತ್ಮ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಜನರು ಶಾಂತಿಯುತ ಪ್ರತಿಭಟನೆ ನಡೆಸಬೇಕು’ ಎಂದು ಕರೆಕೊಟ್ಟರು.

ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಷೆಲ್‌ ಸಿಡಿಸಿದ್ದರಿಂದ ರೊಚ್ಚಿಗೆದ್ದ ಪ್ರತಿಭಟನಕಾರರು ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು. 15ಕ್ಕೂ ಹೆಚ್ಚು ಬಸ್‌ಗಳು ಸುಟ್ಟುಕರಕಲಾಗಿವೆ. 22ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಹಿಂಸಾಚಾರದ ಕಾರಣ 20 ರೈಲುಗಳ ಸಂಚಾರವನ್ನು ಶನಿವಾರ ರದ್ದು ಮಾಡಲಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು