ಶುಕ್ರವಾರ, ಫೆಬ್ರವರಿ 21, 2020
18 °C

ಆರ್ಥಿಕತೆ ಚೇತರಿಕೆಗೆ ಪ್ರಧಾನಿ ವಿಪಕ್ಷಗಳೊಂದಿಗೆ ಕೆಲಸ ಮಾಡಲಿ: ಮಮತಾ ಬ್ಯಾನರ್ಜಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ಕೋಲ್ಕತ್ತ: ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರಾಜಕೀಯ ಹಗೆತನವನ್ನು ಬದಿಗಿಟ್ಟು ವಿರೋಧ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಬಜೆಟ್ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕತೆಯ ಪರಿಸ್ಥಿತಿಯನ್ನು ಸುಧಾರಿಸಲು ಪ್ರತಿಯೊಬ್ಬರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಅಗತ್ಯಬಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ವಿರೋಧ ಪಕ್ಷಗಳೊಂದಿಗೆ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ.  

ಆರ್ಥಿಕತೆ ಕುರಿತಾಗಿ ಆರ್‌ಬಿಐ ನೀಡಿರುವ ಇತ್ತೀಚಿನ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಆರ್‌ಬಿಐ ಏನನ್ನೇ ಹೇಳಿದ್ದರೂ ಕೂಡ ಅದು ಸೂಕ್ಷ್ಮ ವಿಚಾರ. ಆದರೆ ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವ ಬದಲು ಆರ್ಥಿಕತೆಯತ್ತ ಗಮನಹರಿಸಬೇಕು. ಪ್ರಧಾನಮಂತ್ರಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಗತ್ಯಬಿದ್ದರೆ ವಿರೋಧ ಪಕ್ಷಗಳೊಂದಿಗೂ ಚರ್ಚೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸುತ್ತಿಲ್ಲ. ರಾಜ್ಯದಲ್ಲಿ ಇಂದು ಮಂಡನೆಯಾಗಿರುವ ಬಜೆಟ್‌ ಜನಪರವಾಗಿದ್ದು, ಜನರ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡೇ ಮಂಡಿಸಲಾಗಿದೆ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು