ಬುಧವಾರ, ಜೂನ್ 29, 2022
26 °C

ಸಂಯುಕ್ತ ರಂಗ ವಿಭಜಿಸವಂತಹ ಹೆಸರನ್ನು ಆಯ್ಕೆ ಮಾಡಬೇಡಿ: ಒಮರ್ ಅಬ್ದುಲ್ಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಈಗಲೇ ಪ್ರಧಾನಿ ಅಭ್ಯರ್ಥಿ ಯಾರು ಎಂದು ಬಿಂಬಿಸುವುದು ಬೇಡ,  ಬಿಜೆಪಿಯನ್ನು ಸೋಲಿಸಿದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲಿ ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಒಮರ್ ಅಬ್ದುಲ್ಲಾ ಸಲಹೆ  ನೀಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗಗೆ ಮಾತನಾಡಿದರು. ಸಂಯುಕ್ತ ರಂಗ ರಚನೆ ಮಾಡುವ ಸಂಬಂಧ ಒಮರ್ ಅಬ್ದುಲ್ಲಾ ಮತ್ತು ಮಮತಾ ಬ್ಯಾನರ್ಜಿ ಸುಮಾರು 3 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಈಗಾಲೇ ಪ್ರಧಾನಿ ಅಭ್ಯರ್ಥಿಯ ಘೋಷಣೆ ಮಾಡಿದರೆ ಗೊಂದಲ ಅಥವಾ ಅಸಮಾಧಾನಗಳು ಉಂಟಾಗಬಹುದು ಆದ್ದರಿಂದ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೊಷಣೆ ಮಾಡಬಾರದು. ಮೊದಲು ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಸಂಯುಕ್ತ ರಂಗ ವೇದಿಕೆಯಲ್ಲಿ ಸಂಘಟಿಸುವ ಕೆಲಸವಾಗಬೇಕು ಎಂದು ಒಮರ್ ಹೇಳಿದ್ದಾರೆ.

ಸಮಯುಕ್ತ ರಂಗ ಒಕ್ಕೂಟವನ್ನು ವಿಭಜಿಸವಂತಹ ಯಾವುದೇ ಹೆಸರನ್ನು ಆಯ್ಕೆ ಮಾಡಬೇಡಿ ಎಂದು ಓಮರ್ ಅಬ್ದುಲ್ಲ ಮಮತಾ ಬ್ಯಾನರ್ಜಿಗೆ ಹೇಳಿದ್ದಾರೆ ಎನ್ನಲಾಗಿದೆ. ಕೆಲವು ಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವಂತೆ ಒತ್ತಾಯ ಮಾಡುತ್ತಿರುವ ಬೆನ್ನಲೆ ಒಮರ್ ಹೇಳಿಕೆ ಮಮತಾಗೆ ತಲೆ ಬಿಸಿ ತಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳನ್ನು ಒಂದುಗೂಡಿಸುವ ಜವಾಬ್ದಾರಿಯನ್ನು ಮಮತಾ ಬ್ಯಾನರ್ಜಿ ಅವರಿಗೆ ನೀಡಲಾಗಿದೆ. ಮುಂದಿನ ವಾರ ಕೋಲ್ಕತ್ತದಲ್ಲಿ ಸಂಯುಕ್ತ ರಂಗ ಒಕ್ಕೂಟದ ಶಕ್ತಿ ಪ್ರದರ್ಶನ ನಡೆಯಲಿದ್ದು, ಬಹುತೇಕ ಎಲ್ಲಾ ಪ್ರಾದೇಶಿಕ ಪಕ್ಷಗಳು ಭಾಗವಹಿಸುವ ಸಾಧ್ಯತೆಗಳಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು