ಸೋಮವಾರ, ಅಕ್ಟೋಬರ್ 14, 2019
23 °C

ಪ್ರಧಾನಿ ಮೋದಿ–ಮಮತಾ ಬ್ಯಾನರ್ಜಿ ಭೇಟಿ

Published:
Updated:

ನವದೆಹಲಿ/ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸದಲ್ಲಿ ಈ ಭೇಟಿ ನಡೆದಿದೆ. ‘ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ಜತೆ ಚರ್ಚಿಸಿದೆ’ ಎಂದು ಮಮತಾ ಹೇಳಿದ್ದಾರೆ. ಆದರೆ ಪಶ್ಚಿಮ ಬಂಗಾಳ ಬಿಜೆಪಿಯು, ‘ಸಿಬಿಐ ತನಿಖೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಮಮತಾ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ’ ಎಂದು ಆರೋಪಿಸಿದೆ.

‘ಪ್ರಧಾನಿ ಅವರನ್ನು ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾತನಾಡಿದೆ. ರಾಜ್ಯದ ಹೆಸರನ್ನು ‘ಬಂಗಾಳ’ ಎಂದು ಬದಲಿಸಬೇಕು ಎಂದು ಅವರನ್ನು ಕೋರಿದ್ದೇನೆ’ ಎಂದು ಮಮತಾ ಅವರು ಭೇಟಿಯ ವಿವರ ನೀಡಿದ್ದಾರೆ.

‘ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯಲ್ಲಿ ತಮ್ಮ ಆಪ್ತ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ಸಿಬಿಐನಿಂದ ರಕ್ಷಿಸಿಕೊಳ್ಳುವ ಸಲುವಾಗಿ ಮಮತಾ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ಅಮಿತ್‌ ಶಾ ಅವರನ್ನು ಭೇಟಿ ಮಾಡಲೂ ಅವರು ಉತ್ಸುಕರಾಗಿದ್ದದ್ದು ಇದೇ ಕಾರಣಕ್ಕೆ’ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದಾರೆ.

Post Comments (+)