ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರ ಮುಖ್ಯಮಂತ್ರಿ ವಿರುದ್ಧ ಫೇಸ್‌ಬುಕ್‌ನಲ್ಲಿ ಟೀಕೆ: ವ್ಯಕ್ತಿ ಬಂಧನ

Last Updated 14 ಜೂನ್ 2019, 12:25 IST
ಅಕ್ಷರ ಗಾತ್ರ

ಅಗರ್ತಲ: ತ್ರಿಪುರ ಮುಖ್ಯಮಂತ್ರಿಬಿಪ್ಲಬ್‌ ಕುಮಾರ್‌ ದೇವ್‌ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಪ್ರಕಟಿಸಿದ ಆರೋಪಕ್ಕಾಗಿ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಅನುಪಮ್‌ ಪೌಲ್‌ ಬಂಧಿತ ಆರೋಪಿ. ಈತ ಏ‍ಪ್ರಿಲ್‌ 25ರಂದು ಮುಖ್ಯಮಂತ್ರಿ ಅವರನ್ನು ಟೀಕಿಸಿ ಬರೆದಿದ್ದ.

ಬಂಧನದ ಬಳಿಕ ತ್ರಿಪುರ ಪೊಲೀಸರು ದೆಹಲಿ ನ್ಯಾಯಾಲಯದಲ್ಲಿ ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದರು.

ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೊಪ್ಪಿಸಬೇಕೆಂದು ಪೊಲೀಸರು ಸಲ್ಲಿಸಿದ ಮನವಿಯನ್ನು ದೆಹಲಿ ನ್ಯಾಯಾಲಯ ಪುರಸ್ಕರಿಸಿದೆ.

‘ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ತ್ರಿಪುರಕ್ಕೆ ಕರೆದುಕೊಂಡು ಹೋಗಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಳು ಮಾಹಿತಿ, ಮೋಸ, ಪಿತೂರಿ ಆರೋಪದಡಿ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಇದೇ ರೀತಿಯ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಕ್ಕಾಗಿ ಪತ್ರಕರ್ತ ಸೈಕತ್‌ ಪಲಪತ್ರ ಅವರನ್ನು ಈ ಮೊದಲು ಬಂಧಿಸಲಾಗಿತ್ತು. ಅವರಿಗೆ ಜಾಮೀನು ದೊರಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT