ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಮಹಿಳೆಯ ಲೈಂಗಿಕ ದೌರ್ಜನ್ಯ ತಡೆಯಲಾಗದೆ ವ್ಯಕ್ತಿ ಆತ್ಮಹತ್ಯೆ

Last Updated 16 ಅಕ್ಟೋಬರ್ 2018, 11:17 IST
ಅಕ್ಷರ ಗಾತ್ರ

ಮುಂಬೈ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದವರ ಬಣ್ಣಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿ–ಟೂ ಅಭಿಯಾನದ ಮೂಲಕ ಬಯಲಾಗುತ್ತಿವೆ.ಆದರೆ ಮಹಾರಾಷ್ಟ್ರ ಪರ್ಬಾನಿ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ನೀಡಿದಲೈಂಗಿಕ ದೌರ್ಜನ್ಯ ತಡೆಯಲಾಗದೆ ವ್ಯಕ್ತಿಯೊಬ್ಬನೇಣಿಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

ಸಚಿತ್ ಮಿತ್ಕಾರಿ ಮೃತ ವ್ಯಕ್ತಿ. ಇವರು ಪರ್ಬಾನಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಡೆತ್‌ನೋಟ್‌ನಲ್ಲಿ ಏನಿದೆ?
ಸಚಿತ್ ಅವರು , ನಾನು ಕಾರ್ಯನಿರ್ವಹಿಸುತ್ತಿದ್ದ ಪರ್ಬಾನಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಯೊಬ್ಬರು ಕಿರುಕುಳ ನೀಡುತ್ತಿದ್ದು, ಲೈಂಗಿಕ ಸಂಬಂದ ಇಟ್ಟುಕೊಳ್ಳುವಂತೆ ಹಿಂಸಿಸುತ್ತಿದ್ದರು. ಮದುವೆಯಾಗಿರುವ ವಿಚಾರ ತಿಳಿದಿದ್ದರೂ ಮಹಿಳೆಯ ಹಿಂಸೆ ಮಿತಿಮೀರಿತ್ತು. ಜೊತೆಗೆ ಅಪರಾಧ ಪ್ರಕರಣ ದಾಖಲಿಸುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT