ಶನಿವಾರ, ಜನವರಿ 25, 2020
28 °C

ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಯಸಿಯನ್ನು ICUನಲ್ಲಿ ಮದುವೆಯಾಗಿದ್ದ ಯುವಕ ಪರಾರಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಣೆ: ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯತಮೆಯನ್ನು ಒತ್ತಡಕ್ಕೆ ಮಣಿದು ಆಸ್ಪತ್ರೆಯಲ್ಲಿ ಮದುವೆಯಾಗಿದ್ದ ಯುವಕ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಪೋಷಕರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಆಸ್ಪತ್ರೆಯ ಐಸಿಯುನಲ್ಲಿ ಪ್ರೇಯಸಿಯನ್ನು ಮದುವೆಯಾದ ಬಳಿಕ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ. ಅತನ ವಿರುದ್ಧ ಮಹಿಳೆಯು ಅತ್ಯಾಚಾರದ ದೂರು ನೀಡಿದ್ದಾರೆ.

ಆರೋಪಿ ಸೂರಜ್‌ ವಿರುದ್ದ ಐಪಿಸಿ ಸೆಕ್ಷನ್‌ 376ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸ್‌ ಅಧಿಕಾರಿ ಪ್ರಕಾಶ್‌ ರಾಥೋಡ್‌ ಅವರು ಹೇಳಿದ್ದಾರೆ.

ತನಿಖೆಯನ್ನು ಆರಂಭಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ. 

ಆರೋಪಿ ಸೂರಜ್ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಮದುವೆ ಪ್ರಸ್ತಾಪ ಮುಂದಿಟ್ಟಾಗ ಕೀಳು ಜಾತಿ ಎಂದು ನಿರಾಕರಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯಿಂದ ಮನನೊಂದ ಮಹಿಳೆ ನವೆಂಬರ್‌ 27ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು