ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನಕಾರರ ಮೇಲೆ ಮತ್ತೊಮ್ಮೆ ಗುಂಡಿನ ದಾಳಿ

ದೆಹಲಿ: ಮೂರು ದಿನದಲ್ಲಿ ನಡೆದ ಎರಡನೇ ಘಟನೆ
Last Updated 1 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ರಾಜಧಾನಿಯ ಶಾಹೀನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಒಂದು ತಿಂಗಳಿನಿಂದ ಇಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶನಿವಾರ ಸಂಜೆ 4.53ರ ಸುಮಾರಿಗೆ ವೇದಿಕೆಯ ಹಿಂದಿನಿಂದ ವ್ಯಕ್ತಿಯೊಬ್ಬ ಗುಂಡು ಹಾರಿಸಿದ. ತಕ್ಷಣವೇ ಸುತ್ತುವರಿದ ಪ್ರತಿಭಟನಕಾರರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಗನ್‌ ಹಿಡಿದು ಸ್ಥಳಕ್ಕೆ ಬಂದಿದ್ದ ಸ್ಥಳೀಯ ಗುತ್ತಿಗೆದಾರರೊಬ್ಬರು ಪ್ರತಿಭಟನೆ ನಿಲ್ಲಿಸಬೇಕು ಎಂದು ಆಗ್ರಹಿಸಿದ ಎರಡು ದಿನದಲ್ಲಿಯೇ ಈ ಘಟನೆ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗುರುವಾರ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಯುವಕನೊಬ್ಬ ಗುಂಡು ಹಾರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರತಿಭಟನಕಾರರಿಗೆ ಬಿರಿಯಾನಿ ವ್ಯವಸ್ಥೆ–ಟೀಕೆ: ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಬೆಂಬಲಿಸುವವರು ಶಾಹೀನ್‌ ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.

ದೆಹಲಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಯೋಗಿ, ಶಾಹೀನ್‌ ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರಿಗೆ ಕ್ರೇಜಿವಾಲ್ ಸರ್ಕಾರ ಬಿರಿಯಾನಿ ಸರಬರಾಜು ಮಾಡುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT