ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಪು ಘರ್ಷಣೆ ತಡೆಯುವಲ್ಲಿ ಪ್ರಧಾನಿ ಮೋದಿ ವಿಫಲ: ಮನಮೋಹನ್‌ ಸಿಂಗ್‌ ಟೀಕೆ

Last Updated 27 ಅಕ್ಟೋಬರ್ 2018, 2:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಉತ್ತಮವಾಗಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಾಗ್ದಾಳಿ ನಡೆಸಿದ್ದಾರೆ.

ಗುಂಪು ಘರ್ಷಣೆ ಹಾಗೂಜನಸಮೂಹ ನಡೆಸುವ ಹತ್ಯೆ ಪ್ರಕರಣಗಳನ್ನುತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಬರೆದಿರುವ ‘ದ ಪ್ಯಾರಾಡಾಕ್ಸಿಕಲ್‌ ಪ್ರೈಮ್‌ ಮಿನಿಸ್ಟರ್‌: ನರೇಂದ್ರ ಮೋದಿ ಅಂಡ್‌ ಈಸ್‌ ಇಂಡಿಯಾ’ ಪುಸ್ತಕವನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ‘ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹಾಗೂ ಸಿಬಿಐ ಸಂಸ್ಥೆಗಳನ್ನು ದುಬರ್ಳಕೆ ಮಾಡಿಕೊಳ್ಳಲಾಗಿದೆ’ ಎಂದು ಆರೋಪಿಸಿದರು.

ಸಿಬಿಐನಲ್ಲಿ ಸದ್ಯ ಉದ್ಭವಿಸಿರುವ ಬಿಕ್ಕಟ್ಟನ್ನು ಬಗೆಹರಿಸುವುದರ ಬದಲಾಗಿ ಉನ್ನತ ಮಟ್ಟದ ಇಬ್ಬರು ಮೇಲಾಧಿಕಾರಿಗಳನ್ನು ದೀರ್ಘ ರಜೆಯಲ್ಲಿ ಕಳುಹಿಸುವ ಮೂಲಕ ಅವರ ಅಧಿಕಾರವನ್ನು ಮೊಟಕುಗೊಳಿಸಿದ್ದಾರೆ ಎಂದು ಕಿಡಿಕಾರಿದರು.

‘ನರೇಂದ್ರ ಮೋದಿ, ದೇಶದ 14ನೇ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ಮತದಾರರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆದರೂ ಕೊಟ್ಟ ಭರವಸೆಗಳನ್ನು ಈಡೇರಿಸದೆ ಜನರಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ’ ಎಂದರು.

ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಶಶಿ ತರೂರ್‌ಪುಸ್ತಕದಲ್ಲಿ ವಿವರಿಸಿದ್ದಾರೆ ಎಂದು ಹೇಳಿದರು.

ನಾನು ಎಲ್ಲ ಭಾರತೀಯರಿಗೂ ಪ್ರಧಾನಿ ಎಂದು ಹೇಳಿಕೊಳ್ಳುವ ಮೋದಿ, ದೇಶದಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರ, ಜನಸಮುಹ ನಡೆಸುವ ಹತ್ಯೆ ಪ್ರಕರಣಗಳ ಬಗ್ಗೆ ಮೌನ ವಹಿಸಿರುವುದು ಏಕೆ? ಎಂದು ಪ್ರಶ್ನಿಸಿದರು.

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT