ಶನಿವಾರ, ಫೆಬ್ರವರಿ 29, 2020
19 °C

ಮನ್ ಕಿ ಬಾತ್: ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದ ಪ್ರಧಾನಿ ಮೋದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಆಯುಧಗಳು ಮತ್ತು ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗಣರಾಜ್ಯೋತ್ಸವ ದಿನದಂದೇ 2020ರ ಮೊದಲ ಮನದ ಮಾತು (ಮನ್ ಕಿ ಬಾತ್) ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಶಾಂತಿಯುತ ಮಾತುಕತೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಬಂಡಾಯ ಕಡಿಮೆಯಾಗಿದೆ’ ಎಂದರು.

‘ಈಶಾನ್ಯದಲ್ಲಿ ಈಗ ಬಂಡಾಯ ಕಡಿಮೆಯಾಗಿದೆ. ಆ ಪ್ರದೇಶದ ಎಲ್ಲ ಸಮಸ್ಯೆಗಳನ್ನು ಶಾಂತಿಯುತ ಮಾತುಕತೆಗಳ ಮೂಲಕ ಪರಿಹರಿಸಲಾಗುತ್ತಿರುವುದೂ ಇದಕ್ಕೆ ಕಾರಣ’ ಎಂದು ಪ್ರಧಾನಿ ಹೇಳಿದರು.

ಹಿಂಸೆ ಹಾಗೂ ಆಯುಧಗಳ ಮೂಲಕ ಪರಿಹಾರ ಕಂಡುಕೊಳ್ಳಲು ಯತ್ನಿಸುವವರು ಮುಖ್ಯವಾಹಿನಿಗೆ ಬರಬೇಕು ಎಂದೂ ಅವರು ಕರೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು