ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೋಹರ್ ಪರ್ರೀಕರ್ ಆರೋಗ್ಯದಲ್ಲಿ ಚೇತರಿಕೆ; ಏಮ್ಸ್‌ನಿಂದ ಬಿಡುಗಡೆ

Last Updated 14 ಅಕ್ಟೋಬರ್ 2018, 11:06 IST
ಅಕ್ಷರ ಗಾತ್ರ

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ದೆಹಲಿಯ ಅಖಿಲ ಭಾರತೀಯ ವೈದ್ಯವಿಜ್ಞಾನ ಸಂಸ್ಥೆಯಿಂದ (ಏಮ್ಸ್) ಭಾನುವಾರ ಬಿಡುಗಡೆಯಾಗಿದ್ದಾರೆ.

ದೆಹಲಿಯಿಂದ ಗೋವಾಕ್ಕೆ ಮರಳುತ್ತಿರುವ ಪರ್ರೀಕರ್ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುವುದಾಗಿಕೇಂದ್ರ ಸಚಿವ ಶ್ರೀಪಾದ ನಾಯಕ್ ಹೇಳಿದ್ದಾರೆ.

ಗೋವಾ ಸರ್ಕಾರ ಅತಂತ್ರಗೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಿದ ನಾಯಕ್, ಪರ್ರೀಕರ್ ಅವರು ತಮ್ಮ ಆಡಳಿತಾವಧಿಯನ್ನು ಯಶಸ್ವಿಯಾಗಿ ನಡೆಸಲಿದ್ದಾರೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ ಪರ್ರೀಕರ್ ಸೆಪ್ಟೆಂಬರ್ 15ರಂದು ಏಮ್ಸ್‌ಗೆದಾಖಲಾಗಿದ್ದರು.

ಅವರು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಗೋವಾದ ದಾಬೋಲಿಮ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಡೊನಾ ಪೌಲಾ ಬಳಿ ಇರುವ ಅವರ ಖಾಸಗಿ ನಿವಾಸಕ್ಕೆ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಪರ್ರೀಕರ್‌ ಆರೋಗ್ಯದ ಮೇಲೆ ನಿಗಾ ವಹಿಸಲು ಅವರ ಖಾಸಗಿ ನಿವಾಸಕ್ಕೆ ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ವೈದ್ಯರ ತಂಡ ನಿಯೋಜಿಸಲಾಗಿದ್ದು, ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ.

ಭಾನುವಾರ ಬೆಳಿಗ್ಗೆ ಪರ್ರೀಕರ್‌ ಅವರ ಆರೋಗ್ಯ ಕ್ಷೀಣಿಸಿದ್ದರಿಂದ ಏಮ್ಸ್‌ನಲ್ಲಿ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಕೆಲ ಸಮಯದ ನಂತರ ಆಸ್ಪತ್ರೆ ಆಡಳಿತ ಮಂಡಳಿ ಅವರನ್ನು ಬಿಡುಗಡೆ ಮಾಡಲು ನಿರ್ಧಾರ ತೆಗೆದುಕೊಂಡಿತ್ತು. ಸೆ.15ರಂದು ಪರ್ರೀಕರ್‌ ಏಮ್ಸ್‌ಗೆ ದಾಖಲಾಗಿದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT