ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಅನ್ನು ಕೆಲ ಮಂದಿ ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ: ಪ್ರಧಾನಿ ಬೇಸರ 

Last Updated 23 ಮಾರ್ಚ್ 2020, 5:33 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ದೇಶದ ಹಲವು ರಾಜ್ಯಗಳ, ಹಲವು ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿರುವ ಲಾಕ್‌ಡೌನ್‌ನ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.

ಜನ ಲಾಕ್‌ಡೌನ್‌ ಅನ್ನು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಅವರು ಮನಗಂಡಿದ್ದು, ಇದೇ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಈ ಸೂಚನೆ ನೀಡಿದ್ದಾರೆ. ‌

‘ಲಾಕ್‌ಡೌನ್‌ ಅನ್ನು ಜನ ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ರಕ್ಷಣೆ ಮಾಡಿಕೊಳ್ಳಿ. ನಿಮ್ಮ ಕುಟುಂಬವನ್ನು ರಕ್ಷಣೆ ಮಾಡಿಕೊಳ್ಳಿ. ನಿಯಮಾವಳಿಗಳನ್ನು, ಸಲಹೆಗಳನ್ನು ಗಂಭೀರವಾಗಿ ಪಾಲಿಸಿ. ಲಾಕ್‌ಡೌನ್‌ ನಿಯಮಾವಳಿಗಳನ್ನು ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸಬೇಕು,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ದೇಶದ ಹಲವು ರಾಜ್ಯಗಳ 80 ನಗರ, ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡಲು ಕೇಂದ್ರ ಸರ್ಕಾರ ಸೂಚಿಸಿದೆ.

ಅದರಂತೆ ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತಾ ಸೇರಿ ಹಲವು ಮಹಾನಗರಗಳು, 75 ಜಿಲ್ಲೆಗಳು ಇಂದಿನಿಂದ ಲಾಕ್‌ಡೌನ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT