ಗುರುವಾರ , ಜೂನ್ 24, 2021
21 °C

ಮರಾಠ ಸಮುದಾಯದ ಪ್ರತಿಭಟನೆ; 20 ವಾಹನಗಳಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಣೆ: ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯ ಕಿಚ್ಚು ಚಕನ್ ಮತ್ತು ಖೇದ್ ಪ್ರದೇಶಗಳಿಗೂ ವ್ಯಾಪಿಸಿದೆ. ಈ ಪ್ರತಿಭಟನೆಯಲ್ಲಿ 20 ವಾಹನಗಳು ಸುಟ್ಟು ಭಸ್ಮಗೊಂಡಿದ್ದು,  40 ವಾಹನಗಳಿಗೆ ಹಾನಿಯಾಗಿದೆ.

ಪ್ರತಿಭಟನಾಕಾರರು  ಪುಣೆ-ನಾಶಿಕ್  ರಾಷ್ಟ್ರೀಯ ಹೆದ್ದಾರಿಯನ್ನು 7 ಗಂಟೆಗಳ ಕಾಲ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂಸಾಚಾರದಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ.

ಸೊಲ್ಲಾಪುರದಲ್ಲೂ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

35 ವರ್ಷದ ವ್ಯಕ್ತಿಯೊಬ್ಬ ಔರಾಂ‌ಗಾಬಾದ್‌ನಲ್ಲಿ ಚಲಿಸುತ್ತಿರುವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಜೈಸಿಂಗ್‌ ಎಂದು ಈತನನ್ನು ಗುರುತಿಸಲಾಗಿದೆ. ಮೀಸಲಾತಿಗಾಗಿ ಜೀವ ಕೊಡುವುದಾಗಿ ಈತ ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ. ಈ ಸಂದೇಶವನ್ನು  ವ್ಯಾಟ್ಸ್ ಆಪ್‌ನಲ್ಲೂ ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು