ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೂದ್‌ಗೆ ನಿಷೇಧ: ಚೀನಾ ಜತೆ ಸದಸ್ಯ ರಾಷ್ಟ್ರಗಳ ಚರ್ಚೆ

Last Updated 16 ಮಾರ್ಚ್ 2019, 20:13 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಜೈಷ್‌–ಎ–ಮೊಹಮ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಕುರಿತು ಚೀನಾ ಜತೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್‌ ಸೌಹಾರ್ದಯುತವಾಗಿ ಚರ್ಚೆ ಆರಂಭಿಸಿವೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯರಾದ ಈ ರಾಷ್ಟ್ರಗಳು ಮಸೂದ್‌ ಅಜರ್‌ ವಿಷಯದಲ್ಲಿ ಚೀನಾ ತನ್ನ ನಿಲುವು ಬದಲಾಯಿಸಿಕೊಳ್ಳಬೇಕು ಎಂದು ಮನವೊಲಿಸುವ ಪ್ರಯತ್ನದಲ್ಲಿ ತೊಡಗಿವೆ.

ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಸೂದ್‌ಗೆ ನಿಷೇಧ ವಿಧಿಸಲು ತಡೆವೊಡ್ಡಿತ್ತು. ನಾಲ್ಕನೇ ಬಾರಿ ಚೀನಾ ಕೈಗೊಂಡ ನಿರ್ಧಾರಕ್ಕೆ ಭಾರತ ಹಾಗೂ ಇತರ ರಾಷ್ಟ್ರಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಹೀಗಾಗಿ, ಈ ಮೂರು ರಾಷ್ಟ್ರಗಳು ಹೊಸ ಪ್ರಯತ್ನ ಆರಂಭಿಸಿವೆ.

ಭದ್ರತಾ ಮಂಡಳಿಯಲ್ಲೂ ಈ ವಿಷಯದ ಬಗ್ಗೆ ಹೊಸದಾಗಿ ಪ್ರಸ್ತಾವ ಮಂಡಿಸಲು ಸಿದ್ದತೆ ನಡೆಸಿದ್ದು, ಇದಕ್ಕೂ ಪೂರ್ವಭಾವಿಯಾಗಿ ಚರ್ಚೆ ನಡೆಯಲಿದೆ.

’ಚೀನಾ ಇದೇ ರೀತಿ ತಡೆ ಮುಂದುವರಿಸಿದರೆ ಜವಾಬ್ದಾರಿಯುತ ರಾಷ್ಟ್ರಗಳು ಪರ್ಯಾಯ ಕ್ರಮಗಳ ಬಗ್ಗೆ ಆಲೋಚನೆ ನಡೆಸಬೇಕಾಗುತ್ತದೆ’ ಎಂದು ರಾಜತಾಂತ್ರಿಕರೊಬ್ಬರು ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಮಾತುಕತೆಗಳು ಯಶಸ್ವಿಯಾದರೆ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಬಹುದು. ಆದರೆ, ಚೀನಾಕ್ಕೆ ಒಪ್ಪಿಗೆಯಾಗುವ ರೀತಿಯಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕ್ರಮಕ್ಕೆ ಸೂಚನೆ
ಉಗ್ರಗಾಮಿ ಸಂಘಟನೆಗಳ ವಿರುದ್ಧ ಸ್ಥಿರವಾದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಅಮೆರಿಕ ಸೂಚಿಸಿದೆ.

‘ಪಾಕಿಸ್ತಾನದ ನೆಲದಿಂದ ಕಾರ್ಯಾಚರಣೆ ನಡೆಸುತ್ತಿರುವ ಉಗ್ರ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಲು ಮಂದಾಗಬೇಕು ಎಂದು ಒತ್ತಾಯಿಸಿದ್ದೇವೆ. ಅಂತರರಾಷ್ಟ್ರೀಯ ಸಮುದಾಯದ ಜತೆಯೂ ಈ ವಿಷಯದ ಬಗ್ಗೆ ಚರ್ಚಿಸುತ್ತಿದ್ದೇವೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT