ಕೇಂದ್ರದಿಂದ ಭಾರಿ ನೇಮಕಾತಿ ಪರ್ವ

ನವದೆಹಲಿ: ನಿರುದ್ಯೋಗ ಸಮಸ್ಯೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಚುನಾವಣೆ ಹೊಸ್ತಿಲಲ್ಲಿ ಭಾರಿ ಪ್ರಮಾಣದ ನೇಮಕಾತಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಏಳೂವರೆ ಸಾವಿರ ಮಹಿಳೆಯರೂ ಸೇರಿದಂತೆ ಖಾಲಿಯಿರುವ 76,500 ಹುದ್ದೆಗಳ ನೇಮಕಕ್ಕೆ ಗೃಹಸಚಿವಾಲಯ ಮುಂದಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಮೂಲಕ 54,953 ಕಾನ್‌ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 21,566 ಸಿಆರ್‌ಪಿಎಫ್ ಸಿಬ್ಬಂದಿ, 16,984 ಬಿಎಸ್‌ಎಫ್, 8,546 ಎಸ್‌ಎಸ್‌ಬಿ, ಐಟಿಬಿಪಿಯ 4,126 ಮತ್ತು ಅಸ್ಸಾಂ ರೈಫಲ್ಸ್‌ಗೆ 3 ಸಾವಿರ ಸಿಬ್ಬಂದಿ ಭರ್ತಿ ಮಾಡಲಾಗುವುದು.
ಅಭ್ಯರ್ಥಿಗಳ ನೇಮಕಾತಿಯು ಕಂಪ್ಯೂಟರ್ ಆಧರಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಫೆಬ್ರುವರಿ–ಮಾರ್ಚ್‌ನಲ್ಲಿ ಪರೀಕ್ಷೆಗಳು ಜರುಗಲಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.