ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ: ರಾಹುಲ್‌ ರಾಜೀನಾಮೆ ಸಾಧ್ಯತೆ? 

Last Updated 25 ಮೇ 2019, 4:00 IST
ಅಕ್ಷರ ಗಾತ್ರ

ನವದೆಹಲಿ:ಲೋಕಸಭೆ ಚುನಾವಣೆಯಲ್ಲಿನ ಹೀನಾಯಸೋಲಿನ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಶನಿವಾರ ನಡೆಯಲಿದ್ದುಅಧ್ಯಕ್ಷ ರಾಹುಲ್‌ ಗಾಂಧಿ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪಕ್ಷ ಯಾಕೆ ವಿಫಲವಾಯಿತು ಎಂಬ ಬಗ್ಗೆ ಆತ್ಮಾವಲೋಕನ ನಡೆಸಬೇಕು ಎಂಬ ಕೂಗು ಎದ್ದಿದೆ.

ಈಗಾಗಲೇಕಾಂಗ್ರೆಸ್‌ ಪಕ್ಷದಲ್ಲಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭವಾಗಿದೆ. ನಿನ್ನೆ ರಾಜ್‌ ಬಬ್ಬರ್‌, ನಿರಂಜನ್‌ ಪಟ್ನಾಯಕ್‌ ರಾಜೀನಾಮೆ ಘೋಷಿಸಿದ್ದಾರೆ.

ನರೇಂದ್ರ ಮೋದಿ ಅವರಿಂದಾಗಿ ಬೆನ್ನು ಬೆನ್ನಿಗೆ ಎರಡು ಬಾರಿ ಕಾಂಗ್ರೆಸ್‌ ಪಕ್ಷವು ಭಾರಿ ಸೋಲುಂಡಿದೆ. ಈ ಬಾರಿ ಪಕ್ಷಕ್ಕೆ 52 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಮಾತ್ರ ಸಾಧ್ಯವಾಗಿದೆ.

ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಪಕ್ಷ ಗೆದ್ದಿದೆ. ಸೋನಿಯಾ ಅವರು ಇಲ್ಲಿಂದ ಆಯ್ಕೆಯಾಗಿದ್ದಾರೆ. ಪಕ್ಷದ ಅಧ್ಯಕ್ಷ ರಾಹುಲ್‌ ಅವರೇ ಅಮೇಠಿಯಲ್ಲಿ ಸೋತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT