ಶನಿವಾರ, ಜನವರಿ 18, 2020
20 °C

ಅಧಿಕಾರದಲ್ಲಿರುವವರು ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಮರೆಯಬಾರದು: ಮಾಯಾವತಿ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಲಕನೌ: ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಭಾರತ ಜಾತ್ಯತೀತ ರಾಷ್ಟ್ರ, ಇಲ್ಲಿ ಎಲ್ಲಾ ಬಗೆಯ ಧರ್ಮದ, ಜಾತಿಯ ಪ್ರಜೆಗಳು ವಾಸಮಾಡುತ್ತಿದ್ದಾರೆ ಎನ್ನುವುದನ್ನು ಮರೆಯಬಾರದು ಎಂದು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಈ ರಾಷ್ಟ್ರದಲ್ಲಿ ವಿವಿಧ ಜಾತಿ, ಧರ್ಮದ ಜನರು ಅವರದ್ದೇ ಆದ ಜೀವನ ಶೈಲಿ, ಸಂಪ್ರದಾಯ ಹಾಗೂ ಸಂಸ್ಕೃತಿಗಳನ್ನು ಹೊಂದಿದ್ದಾರೆ. ಅವುಗಳನ್ನು ನಾವು ಗೌರವಿಸಬೇಕು ಎಂದಿದ್ದಾರೆ.

ಬುಧವಾರ ಹೊಸವರ್ಷದ ಪ್ರಯುಕ್ತ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ತನ್ನ ಕೋಮುವಾದಿ ನೀತಿಗಳಿಂದ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಪ್ರತಿಭಟನಾಕಾರರು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

2019ನೇ ವರ್ಷ ಅತ್ಯಂತ ನೋವು ತಂದ ವರ್ಷ, ಕೇಂದ್ರ ಹಾಗೂ ರಾಜ್ಯಸರ್ಕಾರಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷದ ಸಂವಿಧಾನ ವಿರೋಧಿ, ಏಕ ಮುಖ ನೀತಿಯಿಂದಾಗಿ ಕೋಮುಗಲಭೆಯನ್ನು ಕಂಡಿರುವ ವರ್ಷ ಎಂದು ಬಣ್ಣಿಸಿದ್ದಾರೆ. ಪ್ರತಿಭಟನೆ ನಡೆಸುವಾಗ ಯಾವುದೇ ಧಾರ್ಮಿಕ ಭಾವನೆಗಳು ಹಾಗೂ ಶಾಂತ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸಬೇಕು. 2020ನೇ ವರ್ಷದಲ್ಲಿ ಇಂತಹ ಯಾವುದೇ ನೋವು ಕಷ್ಟಗಳು ಬಾರದಿರಲಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ಲಾಭಕ್ಕಾಗಿ ಮೋದಿ ಹಿಂದುಳಿದ ಜಾತಿಗೆ ಸೇರಿದರು: ಮಾಯಾವತಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು