ಅಖಿಲೇಶ್‌–ಮಾಯಾವತಿ ನಾಳೆ ಜಂಟಿ ಪತ್ರಿಕಾಗೋಷ್ಠಿ: ಮೈತ್ರಿ ಘೊಷಣೆ ಸಾಧ್ಯತೆ

7

ಅಖಿಲೇಶ್‌–ಮಾಯಾವತಿ ನಾಳೆ ಜಂಟಿ ಪತ್ರಿಕಾಗೋಷ್ಠಿ: ಮೈತ್ರಿ ಘೊಷಣೆ ಸಾಧ್ಯತೆ

Published:
Updated:

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್‌ ಯಾದವ್ ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ನಾಯಕಿ ಮಾಯಾವತಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದು ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಘೋಷಿಸುವ ಸಾಧ್ಯತೆ ಇದೆ. 

ಉತ್ತರ ಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಮಾಡಿಕೊಳ್ಳಲಿದ್ದು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ: ಮಾಯಾವತಿ ಭೇಟಿ ಮಾಡಿದ ಅಖಿಲೇಶ್‌; ಕಾಂಗ್ರೆಸ್‌ ಹೊರಗಿಟ್ಟು ಮೈತ್ರಿ?

ಎಸ್‌ಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ಹಾಗೂ ಬಿಎಸ್‌ಪಿ ಕಾರ್ಯದರ್ಶಿ ಸತೀಶ್‌ ಚಂದ್ರ ಮಿಶ್ರಾ ಜಂಟಿ ಪತ್ರಿಕಾಗೋಷ್ಠಿ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಗೆಲುವು ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ  2019ರ  ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದ್ದು ಸ್ಥಾನಗಳ ಹೊಂದಾಣಿಕೆ ಕುರಿತಂತೆ ಇನ್ನು ಚರ್ಚೆ ಯಾಗಿಲ್ಲ ಎಂದು ಸಮಾಜವಾದಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ. 

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 1

  Frustrated
 • 5

  Angry

Comments:

0 comments

Write the first review for this !