ಗುರುವಾರ , ಫೆಬ್ರವರಿ 25, 2021
29 °C

ಪ್ರತಿಮೆ ಹಣ ಮರಳಿಸಬೇಕಿದೆ ಮಾಯಾವತಿ: ಸುಪ್ರೀಂಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಹಾಗೂ ಪಕ್ಷದ ಚಿಹ್ನೆ ಆನೆಯ ಪ್ರತಿಮೆ ನಿರ್ಮಾಣಕ್ಕೆ ಮಾಡಿರುವ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. 

ಅವರು ಹಣ ಮರಳಿಸಬೇಕಾಗಬಹುದು ಎಂಬುದು ಪೀಠದ ಅಭಿಪ್ರಾಯವಾಗಿದ್ದು, ಈ ಸಂಬಂಧ ಇನ್ನಷ್ಟು ವಿಚಾರಣೆಯ ಅಗತ್ಯವಿದೆ ಎಂದು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. 

ರಾಜಕೀಯ ಪಕ್ಷವೊಂದರ ಪ್ರಚಾರ ಕಾರ್ಯಕ್ಕೆ ಸರ್ಕಾರದ ಬೊಕ್ಕಸದಿಂದ ಹಣ ವ್ಯಯಿಸುವುದು ಸರಿಯಲ್ಲಿ ಎಂದು ಆರೋಪಿಸಿ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠವು, ಏಪ್ರಿಲ್ 2ರಂದು ಅಂತಿಮ ವಿಚಾರಣೆ ನಡೆಸಿ, ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಲಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು