ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಯಾವತಿ–ಅಖಿಲೇಶ್‌ ಭೇಟಿ

Last Updated 20 ಮೇ 2019, 16:48 IST
ಅಕ್ಷರ ಗಾತ್ರ

ಲಖನೌ: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್ ಸೋಮವಾರ ಭೇಟಿಯಾಗಿದ್ದು, ಮತಗಟ್ಟೆ ಸಮೀಕ್ಷೆಗಳಲ್ಲಿ ವ್ಯಕ್ತವಾದ ಫಲಿತಾಂಶ ಕುರಿತು ಚರ್ಚಿಸಿದರು.

ಮತಗಟ್ಟೆ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಎಸ್‌ಪಿ–ಬಿಎಸ್‌ಪಿ ಮೈತ್ರಿಕೂಟ ಅಧಿಕಸ್ಥಾನ ಗೆಲ್ಲುವ ಸೂಚನೆ ನೀಡಿವೆ. ಉಭಯ ಮುಖಂಡರು ಒಂದು ಗಂಟೆ ಚರ್ಚಿಸಿದ್ದು ಮಾತುಕತೆಯ ವಿವರಗಳು ತಿಳಿದುಬಂದಿಲ್ಲ.

ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಶನಿವಾರ ಉಭಯ ಮುಖಂಡರನ್ನು ಭೇಟಿಯಾಗಿದ್ದು, ಅತಂತ್ರ ಫಲಿತಾಂಶ ಬಂದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೇತರ ಪಕ್ಷಗಳು ಒಂದಾಗುವ ಸಾಧ್ಯತೆಗಳನ್ನು ಚರ್ಚಿಸಿದ್ದರು.

ರಾಜ್ಯದಲ್ಲಿ ಎಸ್‌ಪಿ– ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿವೆ. ಎಸ್‌ಪಿ 37, ಬಿಎಸ್‌ಪಿ 38, ಆರ್‌ಎಲ್‌ಡಿ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಸೋನಿಯಾಗಾಂಧಿ, ರಾಹುಲ್‌ಗಾಂಧಿ ಸ್ಪರ್ಧಿಸಿರುವ ರಾಯಬರೇಲಿ, ಅಮೇಠಿಯಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT