ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ, ಬಿಎಸ್‌ಪಿ ಮೈತ್ರಿ

ಶನಿವಾರ, ಮಾರ್ಚ್ 23, 2019
24 °C

ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ, ಬಿಎಸ್‌ಪಿ ಮೈತ್ರಿ

Published:
Updated:

ಲಖನೌ: ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಹಾಗೂ ತೆಲುಗು ನಟ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ. 

ಇಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪವನ್‌ ಕಲ್ಯಾಣ್‌, ಮಾಯಾವತಿ ದೇಶದ ಮುಂದಿನ ಪ್ರಧಾನಿಯಾಗಬೇಕು ಎಂದರು. ಲೋಕಸಭೆ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಹೇಳಿದರು. 

ಮಾಯವತಿ ಅವರನ್ನು ಭಾರತದ ಮುಂದಿನ ಪ್ರಧಾನಿ ಮಾಡುವುದೇ ನಮ್ಮ ಗುರಿ, ಖಂಡಿತವಾಗಿಯೂ ಅವರನ್ನು ಪ್ರಧಾನಮಂತ್ರಿ ಮಾಡುತ್ತೇವೆ ಎಂದರು. ಇದೇ ವೇಳೆ ಮಾತನಾಡಿದ ಮಾಯಾವತಿ ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಬೇಕು ಎಂದರು. 

ಟಿಡಿಪಿ, ಟಿಎಂಸಿ, ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪವನ್‌ ಕಲ್ಯಾಣ್‌, ಕಾಂಗ್ರೆಸ್‌ ಮತ್ತು ಬಿಜೆಪಿಯೇತರ ಪಕ್ಷಗಳು ಈ ಭಾರಿ ದೇಶದ ಗದ್ದುಗೆ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿದರು. 

ಸ್ಥಾನ ಹಂಚಿಕೆ ಕುರಿತಂತೆ ಉಭಯ ಪಕ್ಷಗಳು ಇನ್ನು ಯಾವುದೇ ತೀರ್ಮಾನಕ್ಕೆ ಬಂದಿಲ್ಲ. 

ಬರಹ ಇಷ್ಟವಾಯಿತೆ?

 • 8

  Happy
 • 4

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !