ಬುಧವಾರ, ಫೆಬ್ರವರಿ 26, 2020
19 °C

'ಪ್ರತ್ಯೇಕತಾವಾದಿಗಳಿಗೆ ಮೆಹಬೂಬಾ ಬೆಂಬಲ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಪ್ರತ್ಯೇಕತಾವಾದಿಗಳಿಗೆ ಬೆಂಬಲವಾಗಿದ್ದಾರೆ ಹಾಗೂ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಜನರ ಮೇಲೆ ಗಣನೀಯ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಬ್ಬರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಮೆಹಬೂಬಾ ವಿರುದ್ಧ ಪೊಲೀಸರು ಸಿದ್ಧಪಡಿಸಿದ ಪಿಎಸ್‌ಎ ವರದಿಯಲ್ಲಿ 370ನೇ ವಿಧಿ ರದ್ದುಗೊಳಿಸಿರುವ ಬಗ್ಗೆ ಅವರು ಮಾಡಿರುವ ಟ್ವೀಟ್‌ಗಳನ್ನು ಉಲ್ಲೇಖಿಸಲಾಗಿದೆ. ಎಜೆನ್ಸಿಗಳು ಸಲ್ಲಿಸಿದ ಹಲವಾರು ಗೋಪ್ಯ ವರದಿಗಳು ಪ್ರತ್ಯೇಕತಾವಾದಿಗಳಿಗೆ ಉತ್ತೇಜನ ನೀಡಿರು
ವುದನ್ನು ದೃಢೀಕರಿಸಿವೆ ಎಂದು ಆರೋಪಿಸಲಾಗಿದೆ.

ಮೆಹಬೂಬಾ ಅವರ ಕಳೆದ 10 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತ ಬಂದಿದ್ದಾರೆ.ಕಾನೂನು
ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಅಡಿಯಲ್ಲಿ ನಿಷೇಧಿಸಲಾಗಿರುವ ಜಮ್ಮು–ಕಾಶ್ಮೀರದ ಜಮಾತ್‌ ಎ ಇಸ್ಲಾಮಿಯಾ ಅಂತಹ ಸಂಘಟನೆಗೆ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.  

ಜಮ್ಮು– ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಜನರನ್ನು ಪ್ರಚೋದಿಸುವ ಪ್ರಯತ್ನವನ್ನು ಒಮರ್‌ ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. 

ಫೆಬ್ರುವರಿ 6 ರಂದು ಪಿಎಸ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿ ಇವರಿಬ್ಬರನ್ನು ಬಂಧಿಸಲಾಗಿದೆ. ಒಮರ್‌ ಅವರ ತಂದೆ ಫಾರೂಕ್‌ ಅಬ್ದುಲ್ಲಾ ಅವರ ಮೇಲೆ ಕಳೆದ ಸೆಪ್ಟೆಂಬರ್‌ನಲ್ಲಿ ಪಿಎಸ್‌ಎ ಅಡಿ ಪ್ರಕರಣ ದಾಖಲಾಗಿದೆ.

ಕಳೆದ ವಾರ ಶ್ರೀನಗರದ ಶಾಸಕರ ಹಾಸ್ಟೆಲ್‌ನಿಂದ ಬಿಡುಗಡೆಯಾದ ಕೂಡಲೇ ಎನ್‌ಸಿ ಪ್ರಧಾನ ಕಾರ್ಯದರ್ಶಿ ಅಲಿ ಮುಹಮ್ಮದ್ ಸಾಗರ್, ಪಿಡಿಪಿ ನಾಯಕ ಸರ್ತಾಜ್ ಮದ್ನಿ (ಮೆಹಬೂಬಾ ಸಂಬಂಧಿ) ಮತ್ತು ಪಿಡಿಪಿ ನಾಯಕ ನಯೀಮ್ ಅಖ್ತರ್ ಅವರ ಮೇಲೆ ಪಿಎಸ್‌ಎ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು