ಬುಧವಾರ, ಆಗಸ್ಟ್ 21, 2019
27 °C

ಕಾಶ್ಮೀರ: ಮೆಹಬೂಬಾ, ಒಮರ್‌ಗೆ ಗೃಹಬಂಧನ

Published:
Updated:

ಶ್ರೀನಗರ(ಪಿಟಿಐ): ಜಮ್ಮು–ಕಾಶ್ಮೀರ ದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಒಮರ್‌  ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತಮ್ಮನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಉಸ್ಮಾನ್‌ ಮಜೀದ್‌ ಹಾಗೂ ಸಿಪಿಎಂ ಶಾಸಕ ಎಂ.ವೈ.ತಾರಿಗಾಮಿ ಅವರೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಇಂದು ಸಂಪುಟ ಸಭೆ ಕಾಶ್ಮೀರ ಬಗ್ಗೆ ನಿರ್ಧಾರ?

ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣ ಹಾಗೂ ಭಯೋತ್ಪಾದಕರ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ’ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.  ಶಾಲಾ– ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

Post Comments (+)