ಮೇಕೆದಾಟು ತಡೆ: ಪ್ರಧಾನಿಗೆ ತಮಿಳುನಾಡು ಒತ್ತಡ

7

ಮೇಕೆದಾಟು ತಡೆ: ಪ್ರಧಾನಿಗೆ ತಮಿಳುನಾಡು ಒತ್ತಡ

Published:
Updated:

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ಮುಂದಾಗಿರುವ ಕರ್ನಾಟಕದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಪ್ರಧಾನಿಗೆ ದೂರು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಕಾವೇರಿ ಕಣಿವೆಯಲ್ಲಿ ಕರ್ನಾಟಕದ ಯಾವುದೇ ಯೋಜನೆಗೂ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದಾರೆ.

ಕಾವೇರಿ ನದಿಪಾತ್ರದಲ್ಲಿ ಯಾವುದೇ ಯೋಜನೆ ಆರಂಭಿಸುವ ಮುನ್ನ ಕಡ್ಡಾಯವಾಗಿ ತಮಿಳುನಾಡು ಮತ್ತು ಇತರ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಕರ್ನಾಟಕಕ್ಕೆ ತಾಕೀತು ಮಾಡುವಂತೆ ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !