ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಮೆಟ್ರೊ ಮ್ಯಾನ್' ವಿರೋಧ

ಶುಕ್ರವಾರ, ಜೂನ್ 21, 2019
22 °C

ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಮೆಟ್ರೊ ಮ್ಯಾನ್' ವಿರೋಧ

Published:
Updated:

ದೆಹಲಿ: ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಯೋಜನೆಗೆ ಅನುಮತಿ ನೀಡಬೇಡಿ ಎಂದು ದೆಹಲಿ ಮೆಟ್ರೊದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ಹೇಳಿದ್ದಾರೆ.

ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಯ ಪ್ರಸ್ತಾವವನ್ನು ದೆಹಲಿಯ ಆಮ್ ಆದ್ಮಿ ಸರ್ಕಾರ ಮುಂದಿಟ್ಟಿದೆ. ಈ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಮೆಟ್ರೊ ಮ್ಯಾನ್ ಇ. ಶ್ರೀಧರನ್, ಈ ಯೋಜನೆಗೆ ಅನುಮತಿ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಮೋದಿಯವರಿಗೆ ಪತ್ರ ಬರೆದ ಶ್ರೀಧರನ್, ದೆಹಲಿ ಸರ್ಕಾರವು ಮಹಿಳಾ ಪ್ರಯಾಣಿಕರಿಗೆ ಸಹಾಯ ಮಾಡಬೇಕೆಂದು ಬಯಸಿದರೆ, ಅವರಿಗೆ ಉಚಿತ ಪ್ರಯಾಣ ಕಲ್ಪಿಸುವ ಬದಲು ಪ್ರಯಾಣದ ವೆಚ್ಚವನ್ನು ನೇರವಾಗಿ ಭರಿಸಬಹುದಿತ್ತಲ್ಲವೇ? ಎಂದಿದ್ದಾರೆ.

ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಯ ಪ್ರಸ್ತಾವಕ್ಕೆ ಒಪ್ಪಿಗೆ ನೀಡಬೇಡಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಮೋದಿಗೆ ಬರೆದ ಪತ್ರದಲ್ಲಿ ಇ.ಶ್ರೀಧರನ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೆಟ್ರೊ, ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಕೇಜ್ರಿವಾಲ್

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 9

    Happy
  • 2

    Amused
  • 0

    Sad
  • 1

    Frustrated
  • 5

    Angry

Comments:

0 comments

Write the first review for this !