ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ ಯೋಜನೆಗೆ ಕೊನೆ?

Last Updated 17 ಜುಲೈ 2019, 17:44 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಮುಂದುವರಿಸಿಕೊಂಡು ಹೋಗುವುದರಲ್ಲಿ ಅರ್ಥವಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಈ ಯೋಜನೆ ಸಂಬಂಧ ಸಂಸತ್ತಿನಲ್ಲಿ ನಡೆದ ಚರ್ಚೆಯ ವೇಳೆ ಅವರು ಈ ಮಾತು ಹೇಳಿದ್ದಾರೆ.

‘ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಸರ್ಕಾರವು ಈಗ ಬಡತನ ನಿರ್ಮೂಲನೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆ ಅವುಗಳಲ್ಲಿ ಒಂದು. ಈ ಯೋಜನೆಗಳಿಂದ ಬಡತನ ನಿರ್ಮೂಲನೆಯಾಗಲಿದೆ. ಆಗ ಉದ್ಯೋಗ ಖಾತರಿ ಯೋಜನೆ ಅಪ್ರಸ್ತುತವಾಗುತ್ತದೆ. ಹೀಗಾಗಿ ಅದನ್ನು ಸದಾ ಮುಂದುವರಿಸಿಕೊಂಡು ಹೋಗುವ ಅವಶ್ಯಕತೆಯಿಲ್ಲ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT