ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ

7
ಬಂಡೀಪುರ ಹೆದ್ದಾರಿ ರಾತ್ರಿ ಸಂಚಾರಕ್ಕೆ ಅವಕಾಶ ಕೋರಿ ಅರ್ಜಿ

ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ

Published:
Updated:

ನವದೆಹಲಿ: ಕರ್ನಾಟಕದ ಬಂಡೀಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ– 212ರಲ್ಲಿ ರಾತ್ರಿ ವೇಳೆ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ಒದಗಿಸುವಂತೆ ಕೋರಿ ಕೇರಳ ಮೂಲದ ಖಾಸಗಿ ವ್ಯಕ್ತಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

‘ತೀವ್ರ ಪ್ರವಾಹದಿಂದಾಗಿ ರಾಜ್ಯದಲ್ಲಿ ಉದ್ಭವಿಸಿರುವ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಅಗತ್ಯ ಪರಿಹಾರ ಸಾಮಗ್ರಿ ಸಾಗಿಸುವುದಕ್ಕೆ ಅನುಕೂಲವಾಗುವಂತೆ, ಈ ಮಾರ್ಗದ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ಅರ್ಜಿಯ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ  ಆಕ್ಷೇಪ ವ್ಯಕ್ತಪಡಿಸಿತು.

ಪರಿಹಾರ ಸಾಮಗ್ರಿ ಸಾಗಿಸಲು ತೊಂದರೆಯಾಗಿದೆ ಎಂದು ತಿಳಿಸಿ ಕೇರಳ ಸರ್ಕಾರ ಅರ್ಜಿ ಸಲ್ಲಿಸಿಲ್ಲ. ಬದಲಿಗೆ, ಖಾಸಗಿಯವರು ಈ ಅರ್ಜಿ ಸಲ್ಲಿಸಿರುವುದು ಸೂಕ್ತವಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದಾಗ, ಅರ್ಜಿ ಸಲ್ಲಿಕೆ ಕುರಿತು ತಮ್ಮ ಸಮ್ಮತಿ ಇದೆ ಎಂದು ಕೇರಳ ಸರ್ಕಾರದ ಪರ ಹಾಜರಿದ್ದ ವಕೀಲರು ಹೇಳಿದರು.

ಹಾಗಾದರೆ ನೀವು ಈ ಕುರಿತು ಹೇಳಿಕೆ ಸಲ್ಲಿಸಿದ್ದೀರಾ? ಎಂದು ಪೀಠ ಪ್ರಶ್ನಿಸಿ, ಈ ಕುರಿತು ಕೇರಳ ಸರ್ಕಾರ ಅರ್ಜಿ ಸಲ್ಲಿಸಿದಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಕರ್ನಾಟಕ ಪರ ವಕೀಲರಿಗೆ ಸೂಚಿಸಿತು.

‘ಪರಿಹಾರ ಸಾಮಗ್ರಿಗಳ ಸಾಗಣೆಗೆ ಕರ್ನಾಟಕ ಎಲ್ಲ ರೀತಿಯ ನೆರವು ನೀಡಿದೆ’ ಎಂದು ರಾಜ್ಯದ ಪರ ವಕೀಲರು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !