ಶುಕ್ರವಾರ, ಸೆಪ್ಟೆಂಬರ್ 24, 2021
24 °C

‘ಬಿಜೆಪಿಗೆ ಬಹುಮತ ಬಾರದು’

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಹೇಳಿಕೆಯನ್ನು ಶಿವಸೇನಾ ಅನುಮೋದಿಸಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳನ್ನು ಅವಲಂಬಿಸುವುದು ಅನಿವಾರ್ಯ ಎಂದಿದೆ.

‘2014ರ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಕ್ಕಿತ್ತು. ಆದರೆ, ಈ ಬಾರಿ ಅಷ್ಟು ಸ್ಥಾನ ಗೆಲ್ಲುವುದು ಕಷ್ಟ’ ಎಂದು ಶಿವಸೇನಾದ ಹಿರಿಯ ನಾಯಕ ಸಂಜಯ ರಾವತ್‌ ಪ್ರತಿಪಾದಿಸಿದರು.

‘ರಾಮ್‌ ಮಾಧವ್ ಹೇಳಿರುವುದು ಸರಿ. ಎನ್‌ಡಿಎ ಮುಂದಿನ ಸರ್ಕಾರ ರಚಿಸಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಏಕಾಂಗಿಯಾಗಿ 280–282 ಸ್ಥಾನ ಗೆಲ್ಲುವುದು ಕಷ್ಟ. ಆದರೆ, ಎನ್‌ಡಿಎ ‘ಪರಿವಾರ’ ಈ ಗಡಿ ದಾಟಲಿದೆ’ ಎಂದು ಅಭಿಪ್ರಾಯಪಟ್ಟರು.

ಹಾಲಿ ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನಾ, ಎನ್‌ಡಿಎಯ ಭಾಗವಾಗಿದೆ. ಅಲ್ಲದೆ, ಮಹಾರಾಷ್ಟ್ರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.