ಗುರುವಾರ , ಜೂನ್ 24, 2021
21 °C
15 ವರ್ಷಕ್ಕಿಂತ ಕೆಳಗಿನ ಮತ್ತು 65 ವರ್ಷಕ್ಕಿಂತ ಮೇಲ್ಟಟ್ಟವರಿಗೆ ಮಾತ್ರ ಅವಕಾಶ

ನೇಪಾಳ, ಭೂತಾನ್‌ಗೆ ತೆರಳಲು ಇನ್ನು ಆಧಾರ್‌ ಕೂಡ ದಾಖಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೆರೆಯ ದೇಶಗಳಾದ ನೇಪಾಳ ಮತ್ತು ಭೂತಾನ್‌ಗೆ ತೆರಳಲು 15 ವರ್ಷಕ್ಕಿಂತ ಕೆಳಗಿನ ಮತ್ತು 65 ವರ್ಷಕ್ಕಿಂತ ಮೇಲ್ಟಟ್ಟ ಭಾರತೀಯರು ಇನ್ನು ಮುಂದೆ ಆಧಾರ್‌ ಕಾರ್ಡ್‌ ಅನ್ನು ಪ್ರಯಾಣ ದಾಖಲೆಯಾಗಿ ಬಳಸಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

ಈ ವಯಸ್ಸಿನವರಲ್ಲದೆ ಇತರರು ಆಧಾರ್‌ ಕಾರ್ಡ್ ಅನ್ನು ದಾಖಲೆಯಾಗಿ ಬಳಸುವಂತಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಈ ಹಿಂದೆ 65 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 15 ವರ್ಷಕ್ಕಿಂತ ಕೆಳಗಿನ ವಯೋಮಾನದವರು ಪ್ಯಾನ್‌ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಕಾರ್ಡ್‌ ಅಥವಾ ಪಡಿತರ ಚೀಟಿಯನ್ನು ದಾಖಲೆಯಾಗಿ ಬಳಸುತ್ತಿದ್ದರು. ಈಗ ಈ ಸಾಲಿಗೆ ಆಧಾರ್‌ ಕಾರ್ಡ್‌ ಅನ್ನು ಸೇರಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪಾಸ್‌ಪೋರ್ಟ್‌ ಹೊಂದಿರುವವರು ಭಾರತ ಸರ್ಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ ಅಥವಾ ಮತದಾರರ ಗುರುತಿನ ಚೀಟಿಯನ್ನು ಪ್ರಯಾಣ ದಾಖಲೆಯಾಗಿ ಬಳಸಿ ಈ ಎರಡು ದೇಶಗಳಿಗೆ ತೆರಳಬಹುದು. ನೇಪಾಳ ಮತ್ತು ಭೂತಾನ್‌ಗೆ ತೆರಳಲು ಭಾರತೀಯರಿಗೆ ವೀಸಾ ಅಗತ್ಯವಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು