ಶನಿವಾರ, ಸೆಪ್ಟೆಂಬರ್ 26, 2020
22 °C

ಮೈಕ್ರೊಸಾಫ್ಟ್‌ ಸಿಇಒ ಸತ್ಯ ನಾದೆಲ್ಲ ತಂದೆ,ಐಎಎಸ್‌ ಮಾಜಿ ಅಧಿಕಾರಿ ಯುಗಂಧರ್‌ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ಮೈಕ್ರೊಸಾಫ್ಟ್‌ನ ಸಿಇಒ ಸತ್ಯ ನಾದೆಲ್ಲ ಅವರ ತಂದೆ ಐಎಎಸ್‌ ಮಾಜಿ ಅಧಿಕಾರಿ ಬಿ.ಎನ್‌.ಯುಗಂಧರ್‌(82) ಅವರು ಶುಕ್ರವಾರ ನಿಧನರಾಗಿದ್ದಾರೆ.

ಯುಗಂಧರ್‌ ಅವರು ಪಿ.ವಿ.ನರಸಿಂಹ ರಾವ್‌ ಅವರ ಆಡಳಿತ ಅವಧಿಯಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದರು ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ನ್ಯಾಷನಲ್‌ ಅಕಾಡೆಮಿ ಆಫ್‌ ಅಡ್ಮಿನಿಸ್ಟ್ರೇಷನ್‌ನ ನಿರ್ದೇಶಕರೂ ಆಗಿದ್ದರು.

ಯುಗಂಧರ್‌ ಅವರು ಇಂದು ಮಧ್ಯಾಹ್ನ ನಿಧನರಾದರು. ಅವರು ಕೆಲ ದಿನಗಳಿಂದ ಆನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

ಅವರ ಪತ್ನಿ ಈ ಮೊದಲೇ ನಿಧನರಾಗಿದ್ದಾರೆ. ಸತ್ಯ ನಾದೆಲ್ಲ ಅವರು ಏಕೈಕ ಪುತ್ರ.

1962ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಯುಗಂಧರ್‌ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅಂಗವೈಕಲ್ಯ ಹೊಂದಿದವರು ಪೂರ್ಣ ಪ್ರಮಾಣದಲ್ಲಿ ಸರ್ಕಾರದ ನೆರವನ್ನು ಪಡೆಯುವಂತಾಗಲು ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸಂತಾಪ ಸೂಚಿಸಿದ ಆಂಧ್ರ ಸಿಎಂ

ಯುಗಂಧರ್‌ ಅವರ ನಿಧನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರು ಸಂತಾಪ ಸೂಚಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು