ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಶಂಕೆ: ಪ್ರತ್ಯೇಕ ವಾರ್ಡ್‌ನಲ್ಲಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಸಾವು

Last Updated 8 ಏಪ್ರಿಲ್ 2020, 20:15 IST
ಅಕ್ಷರ ಗಾತ್ರ

ಪಟ್ನಾ: ಕೊರೊನಾ ವೈರಸ್‌ ಸೋಂಕು ಶಂಕೆಯಿದೆ ಎಂದು ಹೇಳಿ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದ ವಲಸೆ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆಘಾತಕಾರಿ ಪ್ರಕರಣ ಗಯಾದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ನಡೆದ ಮೂರು ದಿನಗಳ ಬಳಿಕ ತೀವ್ರ ರಕ್ತ ಸ್ರಾವದಿಂದ ಈ ಮಹಿಳೆ ಸಾವಿಗೀಡಾಗಿದ್ದಾರೆ. ಮಹಿಳೆಯ ಅತ್ತೆ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಂಗಳವಾರ ಈ ದುಷ್ಕೃತ್ಯ ಬಹಿರಂಗವಾಗಿದೆ.

25 ವರ್ಷದ ಮಹಿಳೆ ಪಂಜಾಬ್‌ನ ಲೂಧಿಯಾನದಿಂದ ಬಿಹಾರದ ಗಯಾಕ್ಕೆ ಮಾರ್ಚ್‌ 25ಕ್ಕೆ ಪತಿಯೊಂದಿಗೆ ಬಂದಿದ್ದರು. ಎರಡು ತಿಂಗಳ ಗರ್ಭಿಣಿಯಾಗಿದ್ದ ಅವರಿಗೆ ಗರ್ಭಪಾತವಾಗಿತ್ತು. ಅತಿಯಾದ ರಕ್ತಸ್ರಾವವಾಗುತ್ತಿದ್ದ ಕಾರಣ ಅವರನ್ನು ಮಾರ್ಚ್‌ 27ರಂದು ಅನುಗ್ರಹ ನರೈಣ ಮಗಧ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಬಳಿಕ, ಏಪ್ರಿಲ್‌ 1 ರಂದು ಕೊರೊನಾ ವೈರಸ್‌ ಶಂಕೆ ಇದೆ ಎಂದು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

ತಡರಾತ್ರಿ ತಪಾಸಣೆಗೆ ಬರುತ್ತಿದ್ದ ವೈದ್ಯರು ಏಪ್ರಿಲ್‌ 2 ಮತ್ತು 3ರಂದು ಸತತ ಎರಡು ರಾತ್ರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಕೊರೊನಾ ಸೋಂಕು ಇಲ್ಲ ಎನ್ನುವುದು ದೃಢಪಟ್ಟ ಬಳಿಕ ಮಹಿಳೆಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿತ್ತು. ಆದರೆ, ಮನೆಯಲ್ಲಿ ಮೌನವಾಗಿ ಭಯಗೊಂಡಂತೆ ಇದ್ದರು. ಹೀಗಾಗಿ, ಮನೆಯವರು ಪದೇ ಪದೇ ಒತ್ತಡ ಹೇರಿದ ಬಳಿಕ ವೈದ್ಯರು ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ಬಹಿರಂಗಪಡಿಸಿದರು ಎನ್ನಲಾಗಿದೆ.

‘ತೀವ್ರ ರಕ್ತಸ್ರಾವದಿಂದ ಏಪ್ರಿಲ್‌ 6 ರಂದು ಸೊಸೆ ಮೃತಪಟ್ಟಳು’ ಎಂದು ಮಹಿಳೆಯ ಅತ್ತೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು, ಆಸ್ಪತ್ರೆಗೆ ಬಂದು ಮಹಿಳೆಯು ನೀಡಿದ ವಿವರಣೆ ಆಧಾರದಲ್ಲಿ ವೈದ್ಯರನ್ನು ಗುರುತಿ
ಸುವಂತೆ ಮಂಗಳವಾರ ಅತ್ತೆಗೆ ಸೂಚಿಸಿದ್ದರು. ಆದರೆ, ಆರೋಪಿಯನ್ನು ಗುರುತಿಸಲು ಸಾಧ್ಯವಾಗಿಲ್ಲ.

‘ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಲಾಗುವುದು. ಆರೋಪಗಳನ್ನು ಪರಿಶೀಲಿಸಲಾಗುವುದು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಸ್ಪತ್ರೆಯ ಅಧೀಕ್ಷಕ ಡಾ.ವಿ.ಕೆ.ಪ್ರಸಾದ್ ತಿಳಿಸಿದ್ದಾರೆ.ಘಟನೆ ಸಂಬಂಧ, ವೈದ್ಯರಂತೆ ನಟಿಸಿ ಆಸ್ಪತ್ರೆಯ ಪ್ರತ್ಯೇಕವಾದ ವಾರ್ಡ್‌ ಪ್ರವೇಶಿಸಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT