ಬುಧವಾರ, ಏಪ್ರಿಲ್ 1, 2020
19 °C

ಗಾಯಕ ಮಿಕಾ ಸಿಂಗ್‌ ಮ್ಯಾನೇಜರ್‌ ಸೌಮ್ಯಾ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ಖ್ಯಾತ ಗಾಯಕ ಮಿಕಾ ಸಿಂಗ್‌ ಅವರ ಮ್ಯಾನೇಜರ್‌ ಸೌಮ್ಯಾ ಜೊಹೆಬ್‌ ಖಾನ್‌ (30) ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸೌಮ್ಯಾ ಫೆಬ್ರುವರಿ 3ರಂದು ಸಾವನ್ನಪ್ಪಿದ್ದಾರೆ. ಅತಿಯಾದ ಡ್ರಗ್ಸ್‌ ಸೇವನೆಯೇ ಸಾವಿಗೆ ಕಾರಣ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮಿಕಾ ಸಿಂಗ್‌ ಫೆಬ್ರುವರಿ 3ರಂದೇ ಸೌಮ್ಯಾ ಸಾವಿಗೆ ಸಂತಾಪ ಸೂಚಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಮಿಕಾ ಸಿಂಗ್‌ ಅವರ ನಾಲ್ಕು ಅಂತಸ್ತಿನ ಕಟ್ಟಡದಲ್ಲಿರುವ ಸ್ಟುಡಿಯೊದಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ಸೌಮ್ಯಾ ಒಂಟಿಯಾಗಿ ವಾಸಿಸುತ್ತಿದ್ದರು.  

ಸೌಮ್ಯ ಕೌಟುಂಬಿಕ ಸಮಸ್ಯೆಗಳಿಂದಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ. ಸೌಮ್ಯ ಮೃತದೇಹವನ್ನು ಪಂಜಾಬಿನಲ್ಲಿರುವ ಅವರು ಕುಟುಂಬಸ್ಥರಿಗೆ ನೀಡಿರುವ ಬಗ್ಗೆ ಪೊಲೀಸರು ಹೇಳಿದ್ದಾರೆ.

ಅವರ ಸಾವಿನ ಕುರಿತಾದ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು