ಶುಕ್ರವಾರ, ಫೆಬ್ರವರಿ 26, 2021
28 °C

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ರಾಜೀನಾಮೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ:  ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಿಲಿಂದ್ದೇವ್ರಾ ಭಾನುವಾರ ಹೇಳಿದ್ದಾರೆ.

ಪಕ್ಷವನ್ನು ಮತ್ತಷ್ಟು ದೃಢಪಡಿಸುವುದಕ್ಕಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯವೆಸಗಲು ಇಚ್ಛಿಸುತ್ತಿರುವುದರಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೇವ್ರಾ ತಿಳಿಸಿದ್ದಾರೆ. 

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಈ ವರ್ಷಾಂತ್ಯದಲ್ಲಿ ನಡೆಯಲಿದ್ದು ಅದರ ಹೊಣೆಯನ್ನು ಮೂವರು ಹಿರಿಯ ನಾಯಕರಿಗೆ ವಹಿಸಿಕೊಡುವುದರ ಬಗ್ಗೆ ದೇವ್ರಾ ಚಿಂತನೆ ನಡೆಸಿದ್ದಾರೆ. 

ಜೂನ್ 26ರಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಜತೆ ಸಭೆ ನಡೆಸಿದ ಕೂಡಲೇ ಅಧ್ಯಕ್ಷ ಸ್ಥಾನ ತೊರೆಯುವ ತೀರ್ಮಾನವನ್ನು ದೇವ್ರಾ ವ್ಯಕ್ತಪಡಿಸಿದ್ದರು.

ರಾಜೀನಾಮೆ ವಿಷಯವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ ವೇಣುಗೋಪಾಲ್ ಅವರಿಗೆ ತಿಳಿಸಲಾಗಿದೆ ಎಂದು ಮುಂಬೈ ಕಾಂಗ್ರೆಸ್ ಕಚೇರಿಯ ಪ್ರಕಟಣೆಯಲ್ಲಿ ಹೇಳಿದೆ.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು