ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ದಾಳಿ: ಉಗ್ರನ ಹತ್ಯೆ

Last Updated 30 ಜೂನ್ 2019, 20:01 IST
ಅಕ್ಷರ ಗಾತ್ರ

ಶ್ರೀನಗರ: ಬುದ್ಗಾಮ್‌ನಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಗಾಮ್‌ನ ಬುಗಾಮ್‌ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದವು. ಆ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದರು. ಯೋಧರು ಪ್ರತಿದಾಳಿ ನಡೆಸಿ ಒಬ್ಬನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರ ಯಾವ ಸಂಘಟನೆಗೆ ಸೇರಿದ್ದಾನೆ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT