ಭಾನುವಾರ, ಸೆಪ್ಟೆಂಬರ್ 27, 2020
21 °C

ಬಳ್ಳಾರಿ ಭೇಟಿಗೆ ಜನಾರ್ದನ ರೆಡ್ಡಿಗೆ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆರು ವರ್ಷಗಳ ನಂತರ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದೇ 8 ರಿಂದ ಎರಡು ವಾರವಷ್ಟೇ ಅವರು ಬಳ್ಳಾರಿಯಲ್ಲಿರಬಹುದು. 

ಬಹುಕೋಟಿ ಹಗರಣ ಆರೋಪ ಎದುರಿಸುತ್ತಿರುವ ರೆಡ್ಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದಾರೆ.  

‘ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ನೋಡಲು ಅನುಮತಿ ನೀಡಬೇಕು’ ಎಂದು ರೆಡ್ಡಿ ಅರ್ಜಿಯಲ್ಲಿ ಮನವಿ ಮಾಡಿದ್ದರು. 

ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂಬ ಆದೇಶವಿದ್ದಾಗಲೂ ಆರೋಪಿಗಳ ವಿರುದ್ಧ ಆರು ವರ್ಷಗಳಲ್ಲಿ ಆರೋಪಪಟ್ಟಿ ದಾಖಲಿಸುವಲ್ಲಿ ಯಾಕೆ ವಿಳಂಬ ಮಾಡಲಾಗಿದೆ ಎಂದು ಇಂದಿರಾ ಬ್ಯಾನರ್ಜಿ ಮತ್ತು ಅಜಯ್ ರಸ್ತೋಗಿ ಅವರನ್ನು ಒಳಗೊಂಡ ರಜಾಕಾಲದ ಪೀಠ ಇದೇ ವೇಳೆ ಪ್ರಶ್ನಿಸಿದೆ. 

2015ರ ಜನವರಿಯಲ್ಲಿ ರೆಡ್ಡಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್‌, ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಾಗಳಿಗೆ ಭೇಟಿ ನೀಡುವುದಕ್ಕೆ ನಿಷೇಧ ವಿಧಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು