ನವದೆಹಲಿ:ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಗಳವಸತಿ ಸಮುಚ್ಚಯಗಳಿಲ್ಲಿರುವ ನೆರೆ ಹೊರೆಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ, ಸೋಂಕು ಹರಡದಂತೆ ನೀಡಿರುವಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ತಿಳಿಸಿ ಕೇಂದ್ರ ಸರ್ಕಾರ ಶುಕ್ರವಾರ ತಡರಾತ್ರಿ ಆದೇಶ ಹೊರಡಿಸಿದೆ.

ಕೇಂದ್ರ ಗೃಹ ಸಚಿವಾಲಯದ ವಕ್ತಾರರ ಟ್ವಿಟರ್‌ನಲ್ಲಿ ಈ ಸಂಬಂಧ ಆದೇಶದ ಪ್ರತಿಯನ್ನು ಶುಕ್ರವಾರ ರಾತ್ರಿ 12.45ರಲ್ಲಿ ಪ್ರಕಟಿಸಲಾಗಿದೆ.ಟ್ವಿಟರ್‌ನಲ್ಲಿಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಲಾಗಿದ್ದು, ಆದೇಶಕ್ಕೆ ಗೃಹ ಸಚಿವಾಲಯದ ಕಾರ್ಯದರ್ಶಿ ಅಭಯಭಲ್ಲಾ ಅವರು ಸಹಿ ಹಾಕಿದ್ದಾರೆ.

ಈ ಆದೇಶದ ಪ್ರಕಾರ, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯ ವಸತಿ ಸಮುಚ್ಚಯಗಳಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.ಅಲ್ಲದೆ, ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವಿಕೆ, ಅಂಗಡಿಯಲ್ಲಿ ಕೆಲಸ ಮಾಡುವವರು ಶೇ.50ರಷ್ಟು ಮಂದಿ ಮಾತ್ರ ಕರ್ತವ್ಯ ನಿರ್ವಹಿಸಬೇಕು. ಕೆಲಸಗಾರರುಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅಂತರ ಕಾಯ್ದುಕೊಳ್ಳುವಿಕೆಯನ್ನು ಇವರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.

ನಗರಸಭೆ ಹಾಗೂ ಪುರಸಭೆ ಪ್ರದೇಶಗಳಲ್ಲಿರುವ ಮಾರುಕಟ್ಟೆ ಸ್ಥಳಗಳು, ಮಲ್ಟಿ ಬ್ರಾಂಡ್ ಮತ್ತು ಸಿಂಗಲ್ ಬ್ರಾಂಡ್ ಮಾಲ್‌ಗಳು ಎಂದಿನಂತೆ ಮೇ 3ರವರೆಗೆ ತೆರೆಯಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ವಿನಾಯಿತಿಕೊರೊನಾ ಹಾಟ್‌ಸ್ಪಾಟ್ ಹಾಗೂ ಕಂಟೈನ್ಮೆಂಟ್ ಜೋನ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಈ ಆದೇಶ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರವಾನಗಿ ಪಡೆದ ಎಲ್ಲಾ ಅಂಗಡಿಗಳಿಗೆ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.