ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರಾಡಳಿತ, ರಾಜ್ಯಗಳು ಲಾಕ್‌ಡೌನ್ ನಿಯಮ ದುರ್ಬಲಗೊಳಿಸುವಂತಿಲ್ಲ: ಗೃಹ ಸಚಿವಾಲಯ

Last Updated 20 ಏಪ್ರಿಲ್ 2020, 13:51 IST
ಅಕ್ಷರ ಗಾತ್ರ

ನವದೆಹಲಿ: ಎರಡನೇ ಹಂತದ ಲಾಕ್‌ಡೌನ್‌ಗೆ ಸಂಬಂಧಿಸಿ ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದುರ್ಬಲಗೊಳಿಸುವಂತಿಲ್ಲ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಹೇಳಿದ್ದಾರೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅವಶ್ಯವಿದ್ದಲ್ಲಿ ಸ್ಥಳೀಯ ಪ್ರದೇಶಗಳಿಗೆ ಅನುಗುಣವಾಗಿ ನಿಯಮಗಳನ್ನು ಬಿಗಿಗೊಳಿಸಬಹುದು. ಈ ವಿಚಾರವಾಗಿ ಎಲ್ಲ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕೇರಳ ಸರ್ಕಾರವು ಲಾಕ್‌ಡೌನ್ ಸಡಿಲಗೊಳಿಸಲು ಮುಂದಾಗಿದ್ದನ್ನು ಪ್ರಸ್ತಾಪಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ಲಾಕ್‌ಡೌನ್ ನಿಯಮಗಳ ಜಾರಿ ಕುರಿತು ಗೃಹ ಸಚಿವಾಲಯವು ನಿಗಾ ಇರಿಸಿದೆ. ಎಲ್ಲೆಲ್ಲಿ ನಿಯಮಗಳ ಉಲ್ಲಂಘನೆಯಾಗುತ್ತದೆಯೋ ಅಂತಹ ಕಡೆ ರಾಜ್ಯ ಸರ್ಕಾರಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT